ಮನರಂಜನೆ

"ಗಾಂಧಿ ಮತ್ತು ನೋಟು"ಟ್ರೇಲರ್

"ಗಾಂಧಿ ಮತ್ತು ನೋಟು"ಟ್ರೇಲರ್

 ಬೆಂಗಳೂರು, ಸೆ. 09 ವಿಭಿನ್ನ ಕಥಾಹಂದರ ಹೊಂದಿರುವ "ಗಾಂಧಿ ಮತ್ತು ನೋಟು" ಚಿತ್ರದ ಟ್ರೇಲರ್ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಬಿಡುಗಡೆಗೊಳಿಸಿ ಶುಭ ಕೋರಿದ್ದಾರೆ.
 
 ಸಾಹಿತಿ ವಿ.ನಾಗೇಂದ್ರಪ್ರಸಾದ್ ಪುತ್ರಿ ದಿವಿಜಾ ನಾಗೇಂದ್ರಪ್ರಸಾದ್ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.
 ಲೋಕೇಶ್‌ ಡಿ.ಕೆ, ಮುರುಧ್ಯ, ಪ್ರಜ್ಞಾ ಬ್ರಹ್ಮಾವರ್, ಕೆ.ಬಿ.ರವಿ, ರಂಗಸ್ವಾಮಿ, ನವೀನ್, ವಿಶಾಲ್  ಮುಂತಾದವರು ತಾರಾಬಳಗದಲ್ಲಿದ್ದಾರೆ.
 
 ಭಾವನಾ ಕಂಬೈನ್ಸ್ ಲಾಂಛನದಲ್ಲಿ ಸುಧಾರಾಣಿ ಹೆಚ್.ಆರ್, ವೀಣಾ ಪದ್ಮನಾಭ,  ಮಂಜುನಾಥ್ ಬಿ.ಎನ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.
 
 ಪ್ರಿಯಾಂಕ ಉಪೇಂದ್ರ ಅಭಿನಯದ ಸೆಕೆಂಡ್ ಆಫ್ ಚಿತ್ರ ನಿರ್ದೇಶಿಸಿದ್ದ ಯೋಗಿ ದೇವಗಂಗೆ ಈ ಚಿತ್ರದ ನಿರ್ದೇಶಕರು. ಕಥೆ, ಚಿತ್ರಕಥೆ ಕೂಡ ಯೋಗಿ ಅವರದೆ.
 ಗಾಂಧಿ ತತ್ವಗಳನ್ನು ಹಾಗೂ ನೋಟನ್ನು ಈಗಿನ ಜನ ಯಾವ ರೀತಿ ಬಳಸಿಕೊಳ್ಳುತ್ತಿದ್ದಾರೆ ಎಂಬ ವಿಷಯವನ್ನು ಹಳ್ಳಿ ಹುಡುಗಿ ಪಾತ್ರದ ಮೂಲಕ ಹೇಳ ಹೊರಟಿದ್ದಾರೆ ನಿರ್ದೇಶಕರು. ಚಿಕ್ಕ ವಯಸ್ಸಿನ ಈ ಹುಡುಗಿ ಹೇಳುವ ಮಾತು ಎಲ್ಲಾವರ್ಗದ ಜನರ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದೇ ಇದರ ಕಥಾಸಾರಾಂಶ.
 
 ಸಾಗರದ ತುಂಬ್ರಿ ಎಂಬ ಸ್ಥಳದಲ್ಲೇ ಹೆಚ್ಚಿನ‌ ಚಿತ್ರೀಕರಣ ನಡೆದಿದೆ. ಪ್ರಸ್ತುತ ಚಿತ್ರ ಡಿ ಐ ನಿಂದ ಸಿಂಗಾರಗೊಳ್ಳುತ್ತಿದೆ.  ಅಕ್ಟೋಬರ್ ವೇಳೆಗೆ ತೆರೆಗೆ ಬರುವ ಸಾಧ್ಯತೆಯಿದೆ.
 
 ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ ಹಾಡುಗಳಿಗೆ ವಾಣಿ ಹರಿಕೃಷ್ಣ ಸಂಗೀತ ನೀಡಿದ್ದಾರೆ. ಅಚ್ಚು ಸುರೇಶ್ ಛಾಯಾಗ್ರಹಣ, ವಸಂತಕುಮಾರ್ ಸಂಕಲನ ಹಾಗೂ ವಿ.ಎಲ್ ಸತೀಶ್ ಅವರ ಸಹ ನಿರ್ದೇಶನವಿರುವ ಈ ಚಿತ್ರಕ್ಕೆ ಗುರುಪ್ರಸಾದ್ ಚಂದ್ರಶೇಖರ್ ಸಂಭಾಷಣೆ ಬರೆದಿದ್ದಾರೆ.

ಸುದ್ದಿ ಓದಿ