ಪರಿಸರ ಉಳಿಸಿ, ಭವಿಷ್ಯ ಬೆಳೆಸಿ” ಹಿ ಡಾ. ಪ್ರಶಾಂತ್
ಬಳ್ಳಾರಿ 05: ನಗರದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಪರಿಸರ ಸಂರಕ್ಷಣೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಿದ್ದು, ಗಿಡ ನೆಟ್ಟು ಅವುಗಳನ್ನು ಆರೈಕೆ ಮಾಡುವ ಮೂಲಕ ಪರಿಸರ ಸಂರಕ್ಷಣೆಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ವೈದ್ಯಕೀಯ ವೃತ್ತಿಯಲ್ಲಿರುವ ಡಾ. ಪ್ರಶಾಂತ್ ಕೆಣೆ ಕರೆ ನೀಡಿದರು.ನಗರದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಪೆನ್ಸರ್ ಉಳಿಸಿ, ಭವಿಷ್ಯ ಬೆಳೆಸಿ” ಎಂಬ ಸಂದೇಶವನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶ್ರೀ ವಾಸವಿ ವಿದ್ಯಾಲಯದಲ್ಲಿ ವಿವಿಧ ಪರಿಸರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಂಗವಾಗಿ ಗಿಡಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಶಾಲಾ ಆವರಣದಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಪ್ರತಿಜ್ಞೆಯನ್ನು ಸ್ವೀಕರಿಸಿ, ಹಸಿರು ಪರಿಸರ ನಿರ್ಮಾಣಕ್ಕೆ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು. ಜೂನ್ 5ರಂದು ವಿಶ್ವ ಪರಿಸರ ದಿನವನ್ನು ಮಹತ್ವದ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುತ್ತಿದ್ದು, ಮರಗಳನ್ನು ನೆಡುವುದು ಹಾಗೂ ಪ್ರಕೃತಿಯನ್ನು ಕಾಪಾಡುವುದು ನಮ್ಮ ಕರ್ತವ್ಯ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಶ್ರೀ ವಾಸವಿ ವಿದ್ಯಾಲಯವು ಹಲವು ವರ್ಷಗಳಿಂದ ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತಿದ್ದು, ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಯಶಸ್ವಿಯಾಗಿ ಮಾಡುತ್ತಿದೆ. ಈ ವರ್ಷದ ಪರಿಸರ ದಿನಾಚರಣೆಯ ಅಂಗವಾಗಿ ಶಾಲೆಯಲ್ಲಿ ಸುಮಾರು 44 ಸಸಿಗಳನ್ನು ನೆಡಲಾಯಿತು.ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆರಿ್ಬ.ಎಂ.ಎಸ್. ಶಿಕ್ಷಣ ಸಂಸ್ಥೆಯ ಡಾ. ಪ್ರಶಾಂತ್ ಕೆಣೆ, ಶ್ರೀ ವಾಸವಿ ವಿದ್ಯಾಲಯದ ಕಾರ್ಯದರ್ಶಿಗಳಾದ ಪಿ.ಎಸ್. ಸುರೇಶ್, ಶಾಲೆಯ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮವು ಹಸಿರು ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು.