ಚಿಕ್ಕೋಡಿ

‘ಚಿಕ್ಕೋಡಿ ಜಿಲ್ಲೆಯನ್ನಾಗಿ ಘೋಷಿಸಿ ಗಡಿ ಭಾಗದ ಅಭಿವೃದ್ಧಿಗೆ ಒತ್ತು ನೀಡಿ’

‘ಚಿಕ್ಕೋಡಿ ಜಿಲ್ಲೆಯನ್ನಾಗಿ ಘೋಷಿಸಿ ಗಡಿ ಭಾಗದ ಅಭಿವೃದ್ಧಿಗೆ ಒತ್ತು ನೀಡಿ’

ಚಿಕ್ಕೋಡಿ 17: ಸಾರ್ವಜನಿಕರಿಗೆ ಅನುಕೂಲವಾಗಲು ಚಿಕ್ಕೋಡಿ ನಗರದಲ್ಲಿ ಎಲ್ಲ ಜಿಲ್ಲಾ ಕಚೇರಿಗಳನ್ನು ಸ್ಥಾಪನೆ ಮಾಡಲಾಗಿದೆ. ಚಿಕ್ಕೋಡಿ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕೆಂದು ಮುಖ್ಯಮಂತ್ರಿ ಬಳಿ ಬೇಡಿಕೆ ಇದೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಿಕ್ಕೋಡಿಯನ್ನು ನೂತನ ಜಿಲ್ಲೆಯನ್ನಾಗಿ ಘೋಷಣೆ ಮಾಡಿ ಗಡಿ ಭಾಗದ ಮತ್ತಷ್ಟು ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಕರ್ನಾಟಕ ದೆಹಲಿ ಪ್ರತಿನಿಧಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಒತ್ತಾಯಿಸಿದರು. 

ಇಲ್ಲಿನ  ಸಮಾಜ ಕಲ್ಯಾಣ ಇಲಾಖೆ ಸಮುದಾಯ ಭವನದಲ್ಲಿ ತಾಲೂಕಾ ಆಡಳಿತ, ತಾಲೂಕಾ ಪಂಚಾಯತ, ಪುರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಚಿಕ್ಕೋಡಿಯು ಈಗಾಗಲೇ ಜಿಲ್ಲಾ ಸ್ಥಾನಮಾನ ಹೊಂದಿದೆ. ಜಿಲ್ಲೆಯಾಗುವ ಅರ್ಹತೆಯು ಇದೆ. ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಬಿಟ್ಟು ಎಲ್ಲ ಇಲಾಖೆಯ ಜಿಲ್ಲಾ ಮಟ್ಟದ ಕಚೇರಿಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ. ಮುಖ್ಯಮಂತ್ರಿಗಳು ಮನಸ್ಸು ಮಾಡಿ ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು ಎಂದರು. 

ಪರಿಶಿಷ್ಟ ಪಂಗಡ ಸಮುದಾಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಬರುವ ಅನುದಾನ ಸಮರ​‍್ಕ ಬಳಕೆಯಾಗಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ಸಮುದಾಯದ ಅಭಿವೃದ್ಧಿಗೆ ಮೂಲಭೂತ ಸೌಲಭ್ಯ ಒದಗಿಸಲಾಗಿದೆ ಎಂದದರು. 

ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ಬರುವ ಮಹಿಳಾ ಸ್ವ-ಸಹಾಯ ಸಂಘಗಳಿಗೆ ತಲಾ ಒಂದು ಲಕ್ಷ ರೂ ಅನುದಾನ ನೀಡಲಾಗುತ್ತಿದೆ. ಈ ಸಂಘಗಳಲ್ಲಿ ಎಲ್ಲ ಸಮುದಾಯದವರು ಇದ್ದು, ಪ್ರತಿ ಮಹಿಳಾ ಸಂಘದ ಸದಸ್ಯರು ಆರ್ಥಿಕವಾಗಿ ಸಬಲರಾಗಲು ಆರ್ಥಿಕ ನೆರವು ನೀಡಲಾಗುತ್ತದೆ. ಕೆಳವರ್ಗದ ಸಮುದಾಯಗಳು ಆರ್ಥಿಕ ಮತ್ತು ಸಾಮಾಜಿಕವಾಗಿ ಪ್ರಗತಿ ಹೊಂದಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಶೇಷ ಆಧ್ಯತೆ ನೀಡುತ್ತಿದ್ದಾರೆ ಎಂದರು. 

ಉಪವಿಭಾಗಾಕಾರಿ ಎಸ್‌.ಎಸ್‌.ಸಂಪಗಾಂವಿ ಮಾತನಾಡಿ, ಮಹರ್ಷಿ ವಾಲ್ಮೀಕಿಯವರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡಾಗ ಮನುಷ್ಯನ ಈ ಬದುಕು ಸಾರ್ಥಕವಾಗುತ್ತದೆ ಎಂದರು. 

ವೇದಿಕೆ ಮೇಲೆ ತಹಶೀಲ್ದಾರ ಸಿ.ಎಸ್‌.ಕುಲಕರ್ಣಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ, ಪುರಸಭೆ ಉಪಾಧ್ಯಕ್ಷ ಇರ​‍್ಾನ ಬೇಪಾರಿ, ಸದಸ್ಯರಾದ ನಾಗರಾಜ ಮೇದಾರ, ಅಣ್ಣಾಸಾಹೇಬ ನಾಯಿಕ, ಚಂದ್ರಕಾಂತ ಬುರಡ, ಅಶೋಕ ಮೇದಾರ, ಕಾಡವ್ವ ಬುರಡ, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಸ್‌.ಎಸ್‌.ಕಾದ್ರೊಳಿ, ಡಿಡಿಪಿಐ ಆರ್‌.ಎಸ್‌.ಸೀತಾರಾಮು, ಬಿಇಒ ಬಿ.ಎ.ಮೇಕನಮರಡಿ ಮುಂತಾದವರು ಇದ್ದರು.  

ಮೇಲ್ವಿಚಾರಕ ಸಂಜಯ ದೇಸಾಯಿ ಸ್ವಾಗತಿಸಿದರು. ಆಶಾ ಯಂಕಪ್ಪಗೋಳ ನಿರೂಪಿಸಿದರು. 


ಸುದ್ದಿ ಓದಿ