ಬೆಳಗಾವಿ

ಸರ್ಕಾರಿ ಪಿಯು ಕಾಲೇಜಿನಲ್ಲಿ ಡಾ. ಅಂಬೇಡ್ಕರ್ ಓದು ಕಾರ್ಯಕ್ರಮ ಯಶಸ್ವಿ

ಸರ್ಕಾರಿ ಪಿಯು ಕಾಲೇಜಿನಲ್ಲಿ ಡಾ. ಅಂಬೇಡ್ಕರ್ ಓದು ಕಾರ್ಯಕ್ರಮ ಯಶಸ್ವಿ

ಯಮಕನ ಮರಡಿ 01 : ತಾಲೂಕಿನ ಖಾನಾಪುರ ಗ್ರಾಮದ ಸರ್ಕಾರಿ ಪಿಯು ಕಾಲೇಜಿನಲ್ಲಿ ಜುಲೈ 30ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್ ಓದು ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.  

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಡಾ. ಅಂಬೇಡ್ಕರ್ ಅವರ ವಿಚಾರಧಾರೆ ಕುರಿತ ಪ್ರಬಂಧ ಹಾಗೂ ಗಾಯನ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳಿಗೆ ಪುಸ್ತಕ ಬಹುಮಾನ ವಿತರಿಸಲಾಯಿತು.  ಉಪನ್ಯಾಸಕರಾಗಿ ಆಗಮಿಸಿದ್ದ ಡಾ. ಶ್ರೀಶೈಲ ಮಠಪತಿ ಅವರು ಡಾ. ಅಂಬೇಡ್ಕರ್ ಅವರ ಜೀವನ, ಸಾಧನೆ ಹಾಗೂ ಸಾಮಾಜಿಕ ಚಿಂತನೆಗಳ ಕುರಿತು ಉಪನ್ಯಾಸ ನೀಡಿದರು.  

ಮುಖ್ಯ ಅತಿಥಿಯಾಗಿ ಹುಕ್ಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರಕಾಶ ಅವಲಕ್ಕಿ ಭಾಗವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ವಿದ್ಯಾವತಿ ಭಜಂತ್ರಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.  

ಕಾಲೇಜಿನ ಪ್ರಾಚಾರ್ಯ ಎಂ. ಎಂ. ಮಗದುಮ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪಾಧ್ಯಕ್ಷ ಸುಭಾಷ ದು. ಹೆಬ್ಬಾಳಿ, ಎಸ್ಡಿಎಂಸಿ ಸದಸ್ಯ ಶಶಿಕಾಂತ್ ದಂಡಿನ್ ಸೇರಿದಂತೆ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.  ಉಪನ್ಯಾಸಕ ಶಿವಾನಂದ ಮಠಪತಿ ಕಾರ್ಯಕ್ರಮ ನಿರೂಪಿಸಿದರು. ಪ್ರೀತಿ ಪಾಟೀಲ ಸ್ವಾಗತಿಸಿದರು. ಕುಮಾರಿ ಲಕ್ಷ್ಮೀ ವರದಣ್ಣವರ ವಂದಿಸಿದರು. 


ಸುದ್ದಿ ಓದಿ