ವೀರಭದ್ರೇಶ್ವರ ಕಾರ್ತಿಕೋತ್ಸವ
ವೀರಭದ್ರೇಶ್ವರ ಕಾರ್ತಿಕೋತ್ಸವ
ರಾಣೇಬೆನ್ನೂರು 01: ಇಲ್ಲಿನ ಮೇಡ್ಲೆರಿ ರಸ್ತೆಯ ವಾಗೀಶ ನಗರದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಡಿಸೆಂಬರ್ 3ರಂದು ಮಂಗಳವಾರ ಸಂಜೆ 6 ಗಂಟೆಗೆ ಶ್ರೀ ವೀರಭದ್ರೇಶ್ವರ ಸ್ವಾಮಿಯ ವಾರ್ಷಿಕ ಕಾರ್ತಿಕೋತ್ಸವವು ಜರುಗಲಿದೆ ಎಂದು ದೇವಸ್ಥಾನ ಸಮಿತಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದು ಸಂಜೆ ನಡೆಯುವ ಕಾರ್ತಿಕೋತ್ಸವದ ದಿವ್ಯ ಸಾನಿಧ್ಯವನ್ನು ಹೊನ್ನಾಳಿ ಹಿರೇಕಲ್ಮಠದ ಶ್ರೀ ಷ.ಬ್ರ. ಒಡೆಯರ ಚನ್ನ ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳವರು ವಹಿಸುವರು. ಕಾರ್ಯಕ್ರಮದಲ್ಲಿ ನಾಡಿನ ಅನೇಕ ಗಣ್ಯ ಮಾನ್ಯರು ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಸಮಿತಿಯ ಅಧ್ಯಕ್ಷ ರಾಜಣ್ಣ ಮೋಟಗಿ ತಿಳಿಸಿದ್ದಾರೆ.