ಕುಷ್ಟಗಿ

ಪಿಓಪಿ ಗಣೇಶ ಮೂರ್ತಿ ಮಾರಾಟ ತಹಶೀಲ್ದಾರ ಶೃತಿ ಮಳ್ಳಪ್ಪಗೌಡರ್ ತಾಕೀತು

ಪಿಓಪಿ ಗಣೇಶ ಮೂರ್ತಿ ಮಾರಾಟ ತಹಶೀಲ್ದಾರ ಶೃತಿ ಮಳ್ಳಪ್ಪಗೌಡರ್ ತಾಕೀತು

ಕುಷ್ಟಗಿ18: ಪಟ್ಟಣ ಸೇರಿದಂತೆ ಹಲವೆಡೆ ಪಿಓಪಿ ಮಿಶ್ರಿತ ಗಣೇಶ ಮೂರ್ತಿಗಳನ್ನು ಮಾರುತ್ತಿದ್ದ ಸ್ಥಳಗಳಿಗೆ ತಹಶೀಲ್ದಾರ ಶೃತಿ ಮಳ್ಳಪ್ಪಗೌಡರ್ ಧಿಡೀರ್ ಭೇಟಿ ನೀಡಿ ಪಿ.ಓ.ಪಿ ಮಿಶ್ರಿತ ಗಣೇಶ ಮೂರ್ತಿಗಳ ಮಾರಾಟಗಾರರಿಗೆ ಎಚ್ಚರಿಕೆ ನೀಡಿದ ಘಟನೆ ರವಿವಾರ ಬೆಳಿಗ್ಗೆ ಇಲ್ಲಿನ ತಾಲೂಕು ಪಂಚಾಯಿತಿ ಎದುರಿನ ವಾಣಿಜ್ಯ ಮಳಿಗೆ ಹತ್ತಿರ ನಡೆದಿದೆ. 

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗಣೇಶ ಚತುರ್ಥಿ  ಹಬ್ಬದ ಪ್ರಯುಕ್ತ ಮನೆ ಹಾಗೂ ಗಲ್ಲಿಗಳಲ್ಲಿ ಪ್ರತಿಷ್ಠಾಪನೆ ಮಾಡುವ ಗಣೇಶ ಮೂರ್ತಿಗಳನ್ನು ಮಣ್ಣಿನಿಂದ ತಯಾರಿಸಿದ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಬೇಕು  

ಸರ್ಕಾರಿ ಆದೇಶ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ. ಕಾರಣ ಮಾರಾಟಗಾರರು ಹಾಗೂ ಗಣೇಶ ಮೂರ್ತಿ ಪ್ರತಿಷ್ಠಾಪಿಸುವರು ಪಿ.ಓ.ಪಿ ಮಿಶ್ರಿತ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಬಾರದು ಎಂದು ಸಲಹೆ ನೀಡಿದರು. ಮೂರ್ತಿಗಳ ಮಾರಾಟ ಮಾಡುತ್ತಿದ್ದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪಿ.ಓ.ಪಿ ಮಿಶ್ರಿತ ಮೂರ್ತಿ ಮಾರಾಟಗಾರರಿಗೆ ಖಡಕ್ ಎಚ್ಚರಿಕೆ ನೀಡಿ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿದರು. 

ಪಿ.ಎಸ್.ಐ ಮುದ್ದುರಂಗಸ್ವಾಮಿ, ಪುರಸಭೆಕಚೇರಿ ಸಿಬ್ಬಂದಿ ಹಾಗೂ ಕಂದಾಯ, ಪೊಲೀಸ್ ಇಲಾಖೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು 

ಸುದ್ದಿ ಓದಿ