ಬಳ್ಳಾರಿ

ಗೋಳ್ಳರ ಸಂಘದ ಸಮುದಾಯ ಭವನ ನಿರ್ಮಾಣಕ್ಕೆ 25 ಲಕ್ಷ ಅನುದಾನ: ಶಾಸಕ ಭರತ್ ರೆಡ್ಡಿ

ಗೋಳ್ಳರ ಸಂಘದ ಸಮುದಾಯ ಭವನ ನಿರ್ಮಾಣಕ್ಕೆ 25 ಲಕ್ಷ ಅನುದಾನ: ಶಾಸಕ ಭರತ್ ರೆಡ್ಡಿ
₹25 lakh grant for the construction of the Gollara Sangha community hall: MLA Bharath Reddy

ಲೋಕದರ್ಶನ ವರದಿ

ಬಳ್ಳಾರಿ, ಸೆ. 4: ನಗರದ ಗೋಳ್ಳರ ಸಂಘದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ?25 ಲಕ್ಷ ಅನುದಾನ ನೀಡಲಾಗುವುದು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಘೋಷಿಸಿದರು.  

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.  

ನಗರದ ವಾಲ್ಮೀಕಿ ವೃತ್ತದ ಲೋಕೋಪಾರೆ​‍್ಣ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಅವರು ತಿಳಿಸಿದರು.  

ಶ್ರೀಕೃಷ್ಣನ ಜೀವನದಿಂದ ಧರ್ಮ, ಕರ್ತವ್ಯದ ಪಾಠ ಕಲಿಯಬೇಕು  

ಗೊಳ್ಳರ ಸಮಾಜವು ದಾನ-ಧರ್ಮ ಹಾಗೂ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ. ಇಂತಹ ಸಮುದಾಯದ ಕೊಡುಗೆಯನ್ನು ಗೌರವಿಸಿ, ರಾಜಕೀಯವಾಗಿಯೂ ಶಕ್ತಿ ತುಂಬುವ ಅಗತ್ಯವಿದೆ ಎಂದು ಶಾಸಕ ಭರತ್ ರೆಡ್ಡಿ ಹೇಳಿದರು.  


ಸುದ್ದಿ ಓದಿ