“ಮಾಫಿಯಾ” ಮುಂದಿನ ತಿಂಗಳು ಚಿತ್ರೀಕರಣ ಆರಂಭ
ಬೆಂಗಳೂರು, ಅ. 07 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸುತ್ತಿರುವ 35 ನೇ ಚಿತ್ರ "ಮಾಫಿಯಾ" ನವೆಂಬರ್ ಒಂದರಿಂದ ಚಿತ್ರೀಕರಣ ಪ್ರಾರಂಭಿಸಲಿದೆ.
ಈ ಚಿತ್ರವನ್ನು "ಮಮ್ಮಿ" ಚಿತ್ರದ ಖ್ಯಾತಿಯ ಲೋಹಿತ್ ನಿರ್ದೇಶಿಸುತ್ತಿದ್ದಾರೆ. ಬೆಂಗಳೂರು, ಮೈಸೂರು ಮತ್ತು ರಾಮೋಜಿ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ನಡೆಯಲಿದೆ.ಪ್ರಜ್ವಲ್ ಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸಲಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ಈ ಚಿತ್ರ ನಿರ್ಮಿಸುತ್ತಿದ್ದಾರೆ.ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ. ಜೆಬಿನ್ ಜಾಕಬ್ ಛಾಯಾಗ್ರಹಣವಿದೆ.