ಒಂದು ದೇಶ ಹಿ ಒಂದು ಚುನಾವಣೆ ದೇಶದ ಅಭಿವೃದ್ಧಿಗೆ ಪೂರಕ: ಕ್ಯಾ. ಗಣೇಶ ಕಾರ್ಣಿಕ್
ಧಾರವಾಡ 12: ಒಂದು ದೇಶ ಹಿ ಒಂದು ಚುನಾವಣೆ ಭಾರತದ ಪ್ರಜಾಪ್ರಭುತ್ವದ ಬಲವರ್ಧನೆ ಮತ್ತು ಸುಧಾರಣೆಗಾಗಿ ಇರುವ ನಿರ್ಣಾಯಕ ಅಂಶವಾಗಿದೆ ಎಂದು ವಿಧಾನ ಪರಿಷತ್‌ನ ಮಾಜಿ ಸದಸ್ಯರಾದ ಕ್ಯಾ. ಗಣೇಶ ಕಾರ್ಣಿಕ ಅವರು ಹೇಳಿದರು.
ನಗರದ ಜೆ.ಎಸ್.ಎಸ್. ಮಹಾವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ವಿಭಾಗದಿಂದ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ ಪದೇ-ಪದೇ ಉಂಟಾಗುವ ಚುನಾವಣೆಯ ಕಾರಣದಿಂದ ಮಾನವ ಮತ್ತು ಬಂಡವಾಳ ಸಂಪನ್ಮೂಲದ ವ್ಯರ್ಥದ ಜೊತೆಗೆ ಅಭಿವೃದ್ಧಿಗೂ ಮಾರಕವಾಗಿದೆ ಎಂದು ಹೇಳಿದರು.
ಜನತಾ ಶಿಕ್ಷಣ ಸಮಿತಿಯ ಮಾನ್ಯ ಕಾರ್ಯದರ್ಶಿಗಳಾದ ಡಾ. ಅಜಿತಪ್ರಸಾದ ಅವರು ಮಾತನಾಡಿ, ಚುನಾವಣೆಯ ಹೆಸರಿನಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಸಹಾಯಕವಾಗಿದ್ದು, ದೇಶದ ರಾಜಕೀಯ-ಆರ್ಥಿಕ ಕ್ಷೇತ್ರಗಳನ್ನು ಸಶಕ್ತಗೊಳಿಸಲು ಸಹಾಯಕವಾಗಿವೆ ಎಂದು ಅಭಿಪ್ರಾಯಪಟ್ಟರು.
ಅಧ್ಯಕ್ಷತೆವಹಿಸಿ ಮಾತನಾಡಿದ ಪ್ರಾಚಾರ್ಯ ಡಾ. ವೆಂಕಟೇಶ ಮುತಾಲಿಕ್ ಅವರು ಚುನಾವಣೆಗಳು ಪ್ರಜಾಪ್ರಭುತ್ವದ ಹಬ್ಬಗಳಿದ್ದಂತೆ ಇವುಗಳನ್ನು ಅರ್ಥಪೂರ್ಣವಾಗಿ ನಾಗರಿಕರು ಭಾಗವಹಿಸುವ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕೆಂದರು.
ವೇದಿಕೆಯ ಮೇಲೆ ಮಹಾವೀರ ಉಪಾಧ್ಯೆ, ಐ.ಕ್ಯೂ.ಎ.ಸಿ. ಸಂಯೋಜಕರಾದ ಡಾ. ಶೌಕತಅಲಿ ಎಂ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮಂಜುನಾಥ ಜೋಗಣ್ಣವರ ಉಪಸ್ಥಿತರಿದ್ದರು.
ಪ್ರವೀಣ ಕೊರ್ಲಹಳ್ಳಿ, ಡಾ. ವಿಷ್ಣುವರ್ಧನ, ಬಸಲಿಂಗಪ್ಪ ಅರವಳದ, ಪ್ರಣಮ್ಯ, ಸಹನಾ ಹೊಂಗಲ್ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 