ತಂದೆ-ಮಗನ ಸಂಬಂಧದಲ್ಲಿ 'ಬ್ರ್ಯಾಟ್'ನ ಕ್ರಿಕೆಟ್ ಬೆಟ್ಟಿಂಗ್
'Brat''s cricket betting in father-son relationship
ಡಾಲ್ಫಿನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಮಂಜುನಾಥ್ ಕಂದಕೂರ್ ನಿರ್ಮಿಸಿರುವ ಬಹು ನೀರೀಕ್ಷಿತ 'ಬ್ರ್ಯಾಟ್' ಸಿನಿಮಾ (ಅ.31) ರಾಜ್ಯಾದ್ಯಂತ ಅದ್ದೂರಿಯಾಗಿ ಕೆ.ವಿ.ಎನ್ ಪ್ರೊಡಕ್ಷನ್ ವಿತರಣಾ ಸಂಸ್ಥೆಯಿಂದ ರೀಲೀಸ್ ಆಗುತ್ತಿದೆ. ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡುಗಳಿಂದ 'ಬ್ರ್ಯಾಟ್' ಮೇಲೆ ಪ್ರೇಕ್ಷಕರಿಗೆ ಪ್ರೀತಿ ಉಂಟಾಗಿದೆ. ಹಾಗಾಗಿ ಸಿನಿಮಾ ಗೆದ್ದೆ ಗೆಲ್ಲುತ್ತದೆ ಎಂಬ ವಿಶ್ವಾಸದಲ್ಲಿ ಚಿತ್ರತಂಡವಿದೆ. ನಿನ್ನೆಯಷ್ಟೇ ಈ ಚಿತ್ರದ ಪೇಯ್ಡ್ ಪ್ರೀಮಿಯರ್ ಶೋಗಳನ್ನು ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ, ದಾವಣಗೆರೆ, ಶಿವಮೊಗ್ಗ, ಮೈಸೂರು, ಹಾಗೂ ಗುಲ್ಬರ್ಗದಲ್ಲಿ ನಡೆದಿದೆ. ಈ ಶೋನಲ್ಲಿ ಬ್ರ್ಯಾಟ್‌ಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ.
ಡಾಲಿಂರ್ಗ್ ಕೃಷ್ಣ ಹಾಗೂ ನಿರ್ದೇಶಕ ಶಶಾಂಕ್ ಕಾಂಬಿನೇಷನ್‌ನಲ್ಲಿ ಮೂಡಿ ಬಂದಿರುವ 'ಬ್ರ್ಯಾಟ್' ಸಿನಿಮಾ ಕನ್ನಡ, ತಮಿಳು, ತೆಲುಗು ಸೇರಿದಂತೆ ಐದು ಭಾಷೆಯಲ್ಲಿ ಸಿನಿಮಾ ನಿರ್ಮಾಣವಾಗಿದ್ದರು, ಕನ್ನಡದಲ್ಲಿ ಮಾತ್ರ ಈಗ ಬಿಡುಗಡೆಗೊಳ್ಳುತ್ತಿದೆ. ಚಿತ್ರದ ನಾಯಕಾನಾಗಿ ಡಾಲಿಂರ್ಗ್ ಕೃಷ್ಣ ನಟಿಸಿದ್ದು, ನಾಯಕಿಯಾಗಿ ಮನಿಷಾ ಕಂದಕೂರ್ ಅಭಿನಯ ಮಾಡಿದ್ದಾರೆ. ಮನಿಷಾಗೆ ಇದು ಕನ್ನಡ ಮೊದಲ ಸಿನಿಮಾ. ಉಳಿದಂತೆ ಅಚ್ಯುತ್ ಕುಮಾರ್, ರಮೇಶ್ ಇಂದಿರಾ, ಡ್ರ್ಯಾಗನ್ ಮಂಜು ಮುಂತಾದವರು ತಾರಾಗಣದಲ್ಲಿದ್ದಾರೆ. ಅಭಿಲಾಷ್ ಕಲ್ಲತ್ತಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ಹಾಗೂ ಗಿರಿ ಮಹೇಶ್ ಸಂಕಲನ ಸಿನಿಮಾಗಿದೆ. ಇದೊಂದು ಅಪ್ಪ ಮಗನ ಸಂಘರ್ಷದ ಕಥೆಯಾಗಿದ್ದು, ತಂದೆಯ ಪಾತ್ರದಲ್ಲಿ ಅಚ್ಯುತ್ ಕುಮಾರ್ ನಟಿಸಿದ್ದಾರೆ. ಜೊತೆಗೆ ಚಿತ್ರದಲ್ಲಿ ಕ್ರಿಕೆಟ್ ಬೆಟ್ಟಿಂಗ್ ವಿಷಯವನ್ನು ಹೇಳಲಾಗಿದೆ.
ಈಗಾಗಲೇ ಚಿತ್ರದ ಹಾಡುಗಳು ಮತ್ತು ಟ್ರೇಲರ್ ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡಿದ್ದು ಸಿನಿಮಾ ಮೇಲೆ ನೀರೀಕ್ಷೆ ಮೂಡುವಂತೆ ಮಾಡಿದೆ. ಈ ಮೊದಲು ಕೃಷ್ಣ ಹಾಗೂ ಶಶಾಂಕ್ ಅವರ ಕಾಂಬಿನೇಷನ್‌ನಲ್ಲಿ ಬಂದಿದ್ದ 'ಕೌಶಲ್ಯ ಸುಪ್ರಜಾ ರಾಮ' ದೊಡ್ಡ ಮಟ್ಟದಲ್ಲಿ ಹೆಸರು ಮಾಡಿತ್ತು. ಆ ಕಾರಣದಿಂದಲೂ ಈ ಪ್ಯಾನ್ ಇಂಡಿಯಾ ಚಿತ್ರದ ಮೇಲೆ ಪ್ರೇಕ್ಷಕರು ತುಂಬಾ ಭರವಸೆ ಇಟ್ಟುಕೊಂಡಿದ್ದಾರೆ. ಅಂದಂಗೆ ಈ ಚಿತ್ರದ ಕೃಷ್ಣ ಅವರ ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಹಾಗಾಗಿ ಚಿತ್ರವನ್ನು ತೆರೆಯ ಮೇಲೆ ನೋಡುವ ಕಾತುರದಲ್ಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 