'ಚಲೋ ಸಂಸತ್' ಪ್ರತಿಭಟನೆ ಹಿಂಸಾತ್ಮಕ; ಸಂಸತ್ ಕಡೆಗೆ ಮೆರವಣಿಗೆ ವೇಳೆ ಪ್ರತಿಭಟನಾಕಾರರು-ಪೊಲೀಸರು ಗಾಯ
'Chalo Sansad' March Turns Violent; Protesters, Police Injured as Clash Erupts Near Parliament
ನವದೆಹಲಿ, ಜುಲೈ 20 : ಕಾಕ್‌ರೋಚ್ ಜನತಾ ಪಕ್ಷದ (ಸಿಜೆಪಿ) 'ಚಲೋ ಸಂಸತ್' ಪ್ರತಿಭಟನೆ ಸೋಮವಾರ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದ್ದು, ಸಂಸತ್ ಭವನದತ್ತ ಮೆರವಣಿಗೆ ನಡೆಸಲು ಯತ್ನಿಸಿದ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ ಸಂಭವಿಸಿ ಹಲವರು ಗಾಯಗೊಂಡಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಆಯೋಜಿಸಲಾದ ಈ ಪ್ರತಿಭಟನೆಯಲ್ಲಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಆಗ್ರಹಿಸಲಾಗಿದ್ದು, ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಗಳನ್ನು ಜಾರಿಗೆ ತರಬೇಕೆಂದು ಒತ್ತಾಯಿಸಲಾಯಿತು.
ಜಂತರ್ ಮಂತರ್‌ನಿಂದ ಸಂಸತ್ ಭವನದತ್ತ ಸಾಗುತ್ತಿದ್ದ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಸಂಸತ್ ಸ್ಟ್ರೀಟ್, ರೈಸಿನಾ ರಸ್ತೆ, ಪಟೇಲ್ ಚೌಕ್ ಮತ್ತು ಶಾಸ್ತ್ರಿ ಭವನ ಪ್ರದೇಶಗಳಲ್ಲಿ ಹಲವು ಹಂತದ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದರು.
ಪೊಲೀಸರ ಪ್ರಕಾರ, ಬೆಳಿಗ್ಗೆ ಸುಮಾರು 11.25ಕ್ಕೆ ಪ್ರತಿಭಟನಾಕಾರರು ಸಂಸತ್ ಭದ್ರತಾ ವಲಯದ ಬ್ಯಾರಿಕೇಡ್‌ಗಳನ್ನು ಮುರಿದು ಒಳನುಗ್ಗಲು ಯತ್ನಿಸಿದಾಗ ಪರಿಸ್ಥಿತಿ ಉದ್ವಿಗ್ನಗೊಂಡಿತು. ಇದರಿಂದ ಘರ್ಷಣೆ ಉಂಟಾಗಿ, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ, ಜಲಫಿರಂಗಿ ಹಾಗೂ ಅಶ್ರುವಾಯು ಪ್ರಯೋಗಿಸಿದರು. ಅಶ್ರುವಾಯು ವ್ಯಾಪಿಸುತ್ತಿದ್ದರೂ ಕೆಲ ಪ್ರತಿಭಟನಾಕಾರರು ಮುಂದೆ ಸಾಗಲು ಯತ್ನಿಸಿದರೆ, ಇನ್ನು ಕೆಲವರು ಸ್ಥಳದಿಂದ ಚದುರಿಹೋದರು.
ಘರ್ಷಣೆಯಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸ್ ಸಿಬ್ಬಂದಿ ಇಬ್ಬರೂ ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 10ರಿಂದ 15 ಮಂದಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದ್ದು, ಸಂಸತ್ ಕಡೆಗೆ ಮೆರವಣಿಗೆ ತಲುಪದಂತೆ ದೆಹಲಿ ಪೊಲೀಸ್, ರ್ಯಾಪಿಡ್ ಆಕ್ಷನ್ ಫೋರ್ಸ್ ಹಾಗೂ ಸಾದಾ ಉಡುಪಿನ ಸಿಬ್ಬಂದಿಯನ್ನು ಕೇಂದ್ರ ದೆಹಲಿಯ ವಿವಿಧ ಭಾಗಗಳಲ್ಲಿ ನಿಯೋಜಿಸಲಾಗಿತ್ತು.
ಘರ್ಷಣೆಯ ಬಳಿಕ ಸಿಜೆಪಿ ವಕ್ತಾರ ಸೌರವ್ ದಾಸ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಹೋರಾಟಗಾರ್ತಿ ಗೀತಾಂಜಲಿ (ಸೋನಂ ವಾಂಗ್ಚುಕ್ ಅವರ ಪತ್ನಿ) ಮೇಲೆ ಪೊಲೀಸರು ಹಲ್ಲೆ ನಡೆಸಿ, ಅವರ ಕೂದಲು ಎಳೆದಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ, 12 ವರ್ಷದ ಬಾಲಕಿಯೊಬ್ಬಳಿಗೆ ತಲೆಗೆ ಗಾಯವಾಗಿದ್ದು, ಹಲವು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದು ಹೇಳಿ, ದೆಹಲಿ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಸಾಮಾಜಿಕ ಜಾಲತಾಣಗಳಲ್ಲಿ ಗಾಯಗೊಂಡ ಪ್ರತಿಭಟನಾಕಾರರಿಗೆ ಪ್ರಥಮ ಚಿಕಿತ್ಸೆ ನೀಡುತ್ತಿರುವ ಚಿತ್ರಗಳು ಹಾಗೂ ವಿಡಿಯೊಗಳು ವ್ಯಾಪಕವಾಗಿ ಹರಿದಾಡಿದವು. ಕೆಲವು ದೃಶ್ಯಗಳಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಬಳಸಿರುವುದು ಕಂಡುಬಂದಿದೆ ಎಂದು ಸಿಜೆಪಿ ಸ್ವಯಂಸೇವಕರು ಆರೋಪಿಸಿದರು. ಅಲ್ಲದೆ, ಪ್ರತಿಭಟನೆಯನ್ನು ಚದುರಿಸಲು ಹಲವು ಬಾರಿ ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಲಾಗಿದೆ ಎಂದೂ ಅವರು ದೂರಿದರು.
ಆದರೆ, ದೆಹಲಿ ಪೊಲೀಸರು ಈ ಎಲ್ಲ ಆರೋಪಗಳನ್ನು ತಳ್ಳಿ ಹಾಕಿದ್ದು, ಅತಿಯಾದ ಬಲಪ್ರಯೋಗ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಗೀತಾಂಜಲಿ ಮೇಲೆ ಹಲ್ಲೆ, ಬಾಲಕಿಗೆ ಗಾಯ ಹಾಗೂ ಹಲವು ಪ್ರತಿಭಟನಾಕಾರರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಆರೋಪಗಳು "ಸುಳ್ಳು ಮಾಹಿತಿ" ಎಂದು ಎಕ್ಸ್‌ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ ತಿಳಿಸಿರುವ ಪೊಲೀಸರು, ಇಂತಹ ತಪ್ಪು ಮಾಹಿತಿಯನ್ನು ಹರಡಬಾರದು ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದಲೇ ಪ್ರತಿಭಟನೆಯನ್ನು ವೃತ್ತಿಪರ ರೀತಿಯಲ್ಲಿ ನಿರ್ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದಕ್ಕೂ ಮುನ್ನ, ಸಿಜೆಪಿ ವಕ್ತಾರರಾದ ಸೌರವ್ ದಾಸ್ ಮತ್ತು ಆಶುತೋಷ್ ರಾಂಕಾ ಅವರು ಕೇಂದ್ರ ಆರೋಗ್ಯ ಸಚಿವ ಹಾಗೂ ಬಿಜೆಪಿ ಮಾಜಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳ ಲಿಖಿತ ಮನವಿಯನ್ನು ಸಲ್ಲಿಸಿದರು. ಸುಮಾರು ಎರಡು ಗಂಟೆಗಳ ನಿರೀಕ್ಷೆಯ ಬಳಿಕ ನಡೆದ 10 ನಿಮಿಷಗಳ ಸಭೆಯಲ್ಲಿ ನಡ್ಡಾ ಅವರು ವಿಷಯವನ್ನು ಆಂತರಿಕವಾಗಿ ಚರ್ಚಿಸುವ ಭರವಸೆ ನೀಡಿದ್ದಾರೆ ಎಂದು ದಾಸ್ ಮಾಧ್ಯಮಗಳಿಗೆ ತಿಳಿಸಿದರು. ಪ್ರತಿಭಟನೆಯ ವೇಳೆ ದೊಡ್ಡ ಸಂಖ್ಯೆಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿಯೂ ತಮ್ಮ ಬಳಿ ಇದೆ ಎಂದು ಅವರು ಹೇಳಿದರು.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 