ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ದೀಕ್ಷಾಬೋಧ ಕಾರ್ಯಕ್ರಮ
'Deekshabodha' program for the all-round development of students
ಲೋಕದರ್ಶನ ವರದಿ
ಧಾರವಾಡ 22: ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವ, ಉದ್ಯೋಗ ಕೌಶಲ್ಯ ಹಾಗೂ ಸೃಜನಶೀಲತೆ ಬೆಳೆಸುವ ಉದ್ದೇಶದಿಂದ ಧಾರವಾಡದ ಜೆ.ಎಸ್.ಎಸ್. ಮಂಜುನಾಥೇಶ್ವರ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ 2026-27ನೇ ಸಾಲಿಗೆ ಪ್ರವೇಶ ಪಡೆದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ದೀಕ್ಷಾಬೋಧ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಪ್ರಾಂಶುಪಾಲ ಡಾ. ಅಜಿತ್ ಪ್ರಸಾದ್ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯೊಂದಿಗೆ ಕ್ರೀಡೆ, ಸಾಂಸ್ಕೃತಿಕ, ಎನ್‌ಎಸ್‌ಎಸ್ ಹಾಗೂ ಸಹಪಠ್ಯ ಚಟುವಟಿಕೆಗಳಲ್ಲೂ ಭಾಗವಹಿಸುವಂತೆ ಪ್ರೋತ್ಸಾಹಿಸಲಾಗುತ್ತಿದೆ ಎಂದರು.
ಎಂ.ಎಸ್ಸಿ., ಎಂ.ಕಾಂ. ಹಾಗೂ ಎಂ.ಎ. ಕೋರ್ಸ್ಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಶೈಕ್ಷಣಿಕ ವಾತಾವರಣ, ಚಟುವಟಿಕೆಗಳು ಹಾಗೂ ನಿಯಮ-ನಿಬಂಧನೆಗಳ ಕುರಿತು ಮಾಹಿತಿ ನೀಡಲಾಯಿತು.
ಕೈಗಾರಿಕಾ ಭೇಟಿ, ಕಾರ್ಯಾಗಾರ, ಸೆಮಿನಾರ್, ಉಪನ್ಯಾಸ ಮತ್ತು ವೃತ್ತಿ ಮಾರ್ಗದರ್ಶನದ ಮೂಲಕ ವಿದ್ಯಾರ್ಥಿಗಳ ಕೌಶಲ್ಯ ಹಾಗೂ ಆತ್ಮವಿಶ್ವಾಸ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲ ಡಾ. ಅಜಿತ್ ಪ್ರಸಾದ್ ಸನ್ಮಾನಿಸಿ ಅಭಿನಂದಿಸಿದರು. ಡಾ. ಸೂರಜ್ ಜೈನ್ ಸ್ವಾಗತಿಸಿದರು. ಚೈತ್ರಾ ಕೊಕಾಟಿ ನಿರೂಪಿಸಿದರು. ಡಾ. ಶಿಲ್ಪಾ ನಾಯಕ್ ವಂದಿಸಿದರು.
ಡಾ. ಶಾಲ್ಮಲಾ ರತ್ತಾಕರ, ಡಾ. ಜ್ಯೋತಿ ಅಕ್ಕಿ, ಡಾ. ಶಶಿಕಾಂತ, ರಜನಿ ತಾಳಿಕೋಟಿ, ಶ್ರೀಮುರಳೀಧರ ಹೆಗಡೆ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 