ಮೇ 26 ರಂದು ‘ಪರಿಸರ ಜಾಗೃತಿ ಹಾಗೂ ವಿಶ್ವ ಭೂ ಮತ್ತು ಜಲ ದಿನಾಚರಣೆ’ ಕಾರ್ಯಕ್ರಮ
'Environmental Awareness and World Land and Water Day' program on May 26th
ಲೋಕದರ್ಶನ ವರದಿ
ಬಳ್ಳಾರಿ,ಮೇ 25: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ ಬಳ್ಳಾರಿ ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಇವರ ಸಹಯೋಗದಲ್ಲಿ ಮೇ 26 ರಂದು ಬೆಳಿಗ್ಗೆ 10.30 ಗಂಟೆಗೆ ವಿಶ್ವವಿದ್ಯಾಲಯದ ಆವರಣದಲ್ಲಿರುವ ಪ್ರೊ.ಸಿದ್ದು ಪಿ.ಅಲಗೂರ ಸೆಮಿನಾರ್ ಹಾಲ್‌ನಲ್ಲಿ “ಪರಿಸರ ಜಾಗೃತಿ ಹಾಗೂ ವಿಶ್ವ ಭೂ ಮತ್ತು ಜಲ ದಿನಾಚರಣೆ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ರಾಜೇಶ್ ಎನ್. ಹೊಸಮನೆ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ. ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಮುನಿರಾಜು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವಿಜಯನಗರ ವಿಭಾಗೀಯ ಕಚೇರಿಯ ಹಿರಿಯ ಪರಿಸರ ಅಧಿಕಾರಿ ಬಿ.ಎಸ್.ಮುರಳೀಧರ, ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಎ.ಲೋಕೇಶ, ಕುಲಸಚಿವ(ಮೌಲ್ಯಮಾಪನ) ಪ್ರೊ.ಎನ್.ಎಂ. ಸಾಲಿ ಹಾಗೂ ಹಣಕಾಸು ಅಧಿಕಾರಿ ಸ್ಫೂರ್ತಿ.ಕೆ.ಜಿ ಅವರು ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಬಳ್ಳಾರಿಯ ಪರಿಸರ ಅಧಿಕಾರಿ ಟಿ.ಎಂ. ಸಿದ್ದೇಶ್ವರ ಬಾಬು, ಉಪ ಪರಿಸರ ಅಧಿಕಾರಿ ಪವನ್.ಎಸ್ ಹಾಗೂ ವಿ.ಶ್ರೀ.ಕೃ.ವಿ.ವಿ.ಯ ಸಂಯೋಜಕ ಪ್ರೊ.ನಾಗಭೂಷಣ ಸಿ.ಎಂ ಸೇರಿದಂತೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 