ಜನರ ಸಮಸ್ಯೆಗಳಿಗೆ ಸ್ಪಂದಿಸಲು ‘ಬಾಗಿಲಿಗೆ ಬಂತು ಸರ್ಕಾರ’
'Government at Your Doorstep' to address people's issues
ಲೋಕದರ್ಶನ ವರದಿ
ಜಮಖಂಡಿ ಸೆ.6: ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ ಪರಿಹರಿಸುವ ಉದ್ದೇಶದಿಂದ ಸರ್ಕಾರದ ಆದೇಶದಂತೆ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮ ನಡೆಯುತ್ತಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್ ಹೇಳಿದರು.
ತಾಲೂಕಿನ ಹುನ್ನೂರ ಗ್ರಾಮದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ತಾಲೂಕು ಆಡಳಿತದ ಸಹಯೋಗದಲ್ಲಿ ನಡೆದ ಕಾರ್ಯಕ್ರಮವನ್ನು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್ ಹಾಗೂ ತಹಶೀಲ್ದಾರ್ ಅನೀಲ ಬಡಿಗೇರ್ ಉದ್ಘಾಟಿಸಿ ಮಾತನಾಡಿದರು.
ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ವ್ಯಾಪ್ತಿಯ ನಾಲ್ಕು ತಾಲೂಕುಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಗುತ್ತಿದೆ. ಸರ್ಕಾರದ ಸೇವೆ ಹಾಗೂ ಸೌಲಭ್ಯಗಳು ಪ್ರತಿಯೊಬ್ಬರಿಗೂ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ತಹಶೀಲ್ದಾರ್ ಅನೀಲ ಬಡಿಗೇರ್ ಮಾತನಾಡಿ, ಸರ್ಕಾರದ ಅಧಿಸೂಚನೆಯಂತೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ಕಾರ್ಯಕ್ರಮ ನಡೆಯಲಿದೆ. ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಸಾರ್ವಜನಿಕರು ಆನ್ಲೈನ್ ಐಪಿ ಮೂಲಕ ತಮ್ಮ ಸಮಸ್ಯೆಗಳನ್ನು ನೋಂದಾಯಿಸಬೇಕು. ಪರೀಶೀಲನೆ ಬಳಿಕ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಹವಾಲುಗಳನ್ನು ಪರಿಹರಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದಂತೆ ಒಟ್ಟು 49 ಅರ್ಜಿಗಳನ್ನು ಸಾರ್ವಜನಿಕರು ಸಲ್ಲಿಸಿದರು. ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಲೋಕೋಪಯೋಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ನೀರಾವರಿ, ಇಂಧನ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 