ಲಚ್ಯಾಣದಲ್ಲಿ ಲಕ್ಷ ಬಿಲ್ವಾರ್ಚನೆ: ಮುಗಳಖೋಡದಿಂದ ಸಾವಿರಾರು ಭಕ್ತರ ಪಾಲ್ಗೊಳ್ಳುವಿಕೆ
'Laksha Bilvarchana' at Lachyan: Thousands of devotees participate from Mugalkhod
ಮುಗಳಖೋಡ 06 : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣದಲ್ಲಿ ಆಗಸ್ಟ್ 9ರಂದು ನಡೆಯಲಿರುವ ಸಿದ್ಧಲಿಂಗ ಮಹಾರಾಜರ ಕರ್ತೃ ಗದ್ದುಗೆಗೆ ಲಕ್ಷ ಬಿಲ್ವಾರ್ಚನೆ ಹಾಗೂ 5 ಸಾವಿರ ಮುತ್ತೈದೆಯರಿಗೆ ಉಡಿ ತುಂಬುವ ಧಾರ್ಮಿಕ ಕಾರ್ಯಕ್ರಮಕ್ಕೆ ಮುಗಳಖೋಡದಿಂದ ಸಾವಿರಾರು ಭಕ್ತರು ತೆರಳಲಿದ್ದಾರೆ. ಪಟ್ಟಣದ ಯಲ್ಲಾಲಿಂಗ ಮಹಾರಾಜರ ಬ್ರಹ್ಮಮಠದ ಪೀಠಾಧಿಪತಿಗಳಾದ ಷಡಕ್ಷರಿ ಶಿವಯೋಗಿ ಡಾ. ಮುರುಘರಾಜೇಂದ್ರ ಮಹಾಸ್ವಾಮೀಜಿ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಪೂರ್ವಭಾವಿ ಸಭೆ ಮಠದ ಅನುಭವ ಮಂಟಪದಲ್ಲಿ ನಡೆಯಿತು.
ಸಭೆಯಲ್ಲಿ ಮಾತನಾಡಿದ ಶ್ರೀಗಳು, ಲಚ್ಯಾಣದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದು, ಕಾರ್ಯಕ್ರಮವು ವೈಭವದಿಂದ ನೆರವೇರಲಿದೆ ಎಂದು ತಿಳಿಸಿದರು. ಮುಗಳಖೋಡದಿಂದ ಸಾವಿರಾರು ವಾಹನಗಳು ಹಾಗೂ ದ್ವಿಚಕ್ರ ವಾಹನಗಳ ಮೂಲಕ ಭಕ್ತರು ಪ್ರಯಾಣ ಬೆಳೆಸಲಿದ್ದು, ಎಲ್ಲರೂ ರಸ್ತೆ ನಿಯಮಗಳನ್ನು ಪಾಲಿಸಿ ಸುರಕ್ಷಿತವಾಗಿ ಪ್ರಯಾಣಿಸುವಂತೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಶಶಿಕಾಂತ ಗುರೂಜಿ ಪಡಸಲಗಿ, ಸಿದ್ದಲಿಂಗ ದೇವರು, ಪ್ರಭುದೇವರು, ಬಂತನಾಳದ ನಾನಾಗೌಡ ಪಾಟೀಲ ಸೇರಿದಂತೆ ಪುರಸಭೆ ಸದಸ್ಯರು ಹಾಗೂ ಶ್ರೀಮಠದ ಭಕ್ತರು ಉಪಸ್ಥಿತರಿದ್ದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 