'ಜನಸಂಖ್ಯೆ ಹೆಚ್ಚಳ ಜಗತ್ತಿನ ತುತರ್ು ಸಮಸ್ಯೆ'
ಕೋಲ್ಕತಾ: ಹೆಚ್ಚುತ್ತಿರುವ ಜನಸಂಖ್ಯೆಯು ವಿಶ್ವದ ಪ್ರಮುಖ ಸಮಸ್ಯೆಯಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜ್ ಕಳವಳ ವ್ಯಕ್ತಪಡಿಸಿದ್ದಾರೆ. ವಿಶ್ವ ಜನಸಂಖ್ಯಾ ದಿನದಂದು ಈ ಕುರಿತು ಟ್ವೀಟ್ ಮಾಡಿರುವ ಅವರು ಇದು ನಿಜಕ್ಕೂ ಪ್ರಪಂಚ ಎದುರಿಸುತ್ತಿರುವ ಗಂಭೀರ ಸಮಸ್ಯೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮಮತಾ ಬ್ಯಾನಜರ್ಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಇದನ್ನು ಪೋಸ್ಟ್ ಮಾಡಿ, ಈ ವಿಷಯದ ಬಗ್ಗೆ ಜಾಗೃತಿ ಮೂಡಿಸಲು ಒಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದ್ದಾರೆ. ಜನಸಂಖ್ಯಾ ಸ್ಫೋಟ ತುತರ್ು ಸಮಸ್ಯೆಯಾಗಿದ್ದು ಈ ನಿಟ್ಟಿನಲ್ಲಿ ಸಮಸ್ಯೆ ನಿವಾರಣೆಗೆ ಗಮನವನ್ನು ಕೇಂದ್ರೀಕರಿಸಲು ಈ ದಿನಾಚರಣೆ ಪ್ರಯತ್ನಿಸುತ್ತದೆ. ಜನಸಂಖ್ಯೆಯ ಸಮಸ್ಯೆಗಳ ನಿವಾರಣೆಯ ಪ್ರಾಮುಖ್ಯತೆಯನ್ನು ಅರಿತು ವಿಶ್ವಸಂಸ್ಥೆ ಮೊದಲಿಗೆ ಜುಲೈ 11, 1987 ರಂದು ಈ ದಿನ ಆಚರಿಸಿತು.
1994 ರ ಜನಸಂಖ್ಯೆ ಮತ್ತು ಅಭಿವೃದ್ಧಿಯ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮಂಡನೆಯಾದ ಇನ್ನೂ ಪರಿಹಾರವಾಗದ ಗುರಿಗಳ ಈಡೇರಿಕೆ ಈ ಬಾರಿಯ ಜನಸಂಖ್ಯಾ ದಿನ ಕರೆ ನೀಡಿದೆ. ವಿಶ್ವ ಜನಸಂಖ್ಯಾ ದಿನವನ್ನು ವಿವಿಧ ದೇಶಗಳಲ್ಲಿ ವಿಭಿನ್ನವಾಗಿ ಆಚರಿಸಲಾಗುತ್ತದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 