ಬೆಳಗಾವಿ: 'ಸ್ವಾತಂತ್ರ್ಯದ ಸದ್ಭಳಕೆಯ ಮೂಲಕ ಭವಿಷ್ಯ ರೂಪಿಸಿಕೊಳ್ಳಿ '
ಲೋಕದರ್ಶನ ವರದಿ
ಬೆಳಗಾವಿ 16: "ಈ ಸ್ವಾತಂತ್ರ್ಯ ನಮಗೆ ಅನೇಕ ಮಹನೀಯರ ತ್ಯಾಗ, ಬಲಿದಾನಗಳ ಕೊಡುಗೆ, ಈ ಸ್ವಾತಂತ್ರ್ಯವನ್ನು ಸರಳತೆಯ ದೃಷ್ಟಿಯಿಂದ ಬಳಸಿಕೊಂಡು ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ನಿವೃತ್ತ ವಾಯುಸೇನಾ ಅಧಿಕಾರಿ ಬಸವರಾಜ ವನ್ನೂರ ಅವರು ಹೇಳಿದರು.
ಅವರು ಸ್ಥಳೀಯ ಎಸ್ ಜಿ ವಿ ಮಹೇಶ ಪದವಿ ಪೂರ್ವ ಕಾಲೇಜು, ಬೆಳಗಾವಿಯಲ್ಲಿ ದ್ವಜಾರೋಹಣ ಕಾರ್ಯವನ್ನು ನೆರವೇರಿಸಿ ಮಾತನಾಡುತ್ತಿದ್ದರು. "ಸ್ವೇಚ್ಛೆಯಾಗದೆ ನಿಮ್ಮನ್ನು ಅರಿತು ಗುಣಾತ್ಮಕತೆ ಬೆಳೆಸಿಕೊಳ್ಳಿ, ಆ ಮೂಲಕ ದೇಶದ ಕೀತರ್ಿಯನ್ನು ಹೆಚ್ಚಿಸಿ" ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಎಂ ವಿ ಭಟ್ಟ ಮಾತನಾಡಿ " ಭಾರತವನ್ನು ವಿಶ್ವಗುರು ಎಂದು ಕರೆಯುವುದು ಇಲ್ಲಿನ ಸಂಸ್ಕೃತಿಯ ಶ್ರೇಷ್ಠತೆಯ ಆಧಾರದ ಮೇಲೆ, ಆದರೆ ನಮ್ಮಲ್ಲಿ ಸಾಮೂಹಿಕ ಸಂಘಟನೆಯ ಕೊರತೆಯಿದೆ, ಅದನ್ನು ಸರಿದೂಗಿಸುವ ಹೊಣೆಗಾರಿಕೆ ನಮ್ಮ ಮೇಲಿದೆ " ಎಂದರು. ವೇದಿಕೆಯ ಮೇಲೆ ನಾಗರಿಕ ವಿಕಾಸ ವೇದಿಕೆಯ ಅಧ್ಯಕ್ಷ ಎಲ್ ಎಸ್ ಪಾಟೀಲ್, ಉಪಪ್ರಾಚಾರ್ಯರಾದ ಆನಂದ ಖೋತ್ ಉಪಸ್ಥಿತರಿದ್ದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮುಕುಂದ ಗೋಖಲೆ ಸ್ವಾಗತಿಸಿದರು. ಉಪನ್ಯಾಸಕಿ ಕೃತಿಕಾ ಶೆಟ್ಟಿ ವಂದನಾರ್ಪಣೆ ಮಾಡಿದರು. ಅಭಿಷೇಕ ಕುಂಬಾರ ಮತ್ತು ಐಶ್ವರ್ಯ ಅಡವಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾಥರ್ಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 