ರನ್ನ ಬೆಳಗಲಿಯಲ್ಲಿ ಇಂದು ‘ಪ್ರಜಾಸೇವೆ ಆಂದೋಲನ’

ರನ್ನ ಬೆಳಗಲಿಯಲ್ಲಿ ಇಂದು ‘ಪ್ರಜಾಸೇವೆ ಆಂದೋಲನ’  'Public Service Movement' in Ranna Belagali today


ಬೆಳಗಲಿ 04: ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಜಾಸೇವೆ ಆಂದೋಲನ’ ಸಭೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಭೂಮಿಪೂಜೆ ಕಾರ್ಯಕ್ರಮವು ಸೆ. 5ರಂದು ಬೆಳಗಲಿ ಪಟ್ಟಣದಲ್ಲಿ ನಡೆಯಲಿದೆ. ಪಟ್ಟಣದ ಬಂದಲಕ್ಷ್ಮೀ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 10 ಗಂಟೆಗೆ ಮುಧೋಳ ಶಾಸಕ ಆರಿ​‍್ಬ. ತಿಮ್ಮಾಪೂರ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಲಿದೆ.

ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದು, ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲುಗಳನ್ನು ನೇರವಾಗಿ ಸ್ವೀಕರಿಸಿ, ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಇದೇ ಸಂದರ್ಭದಲ್ಲಿ ಪಟ್ಟಣ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ನೂತನ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಲಿದೆ. ಸಾರ್ವಜನಿಕರು ಹಾಗೂ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಕೋರಿದ್ದಾರೆ.