ನೀಲಗುಂದ ಗ್ರಾಮದಲ್ಲಿ ದ್ಯಾಮವ್ವ ದೇವಿಗೆ ಉಡಿ ತುಂಬುವ ಕಾರ್ಯಕ್ರಮ

ನೀಲಗುಂದ ಗ್ರಾಮದಲ್ಲಿ ದ್ಯಾಮವ್ವ ದೇವಿಗೆ ಉಡಿ ತುಂಬುವ ಕಾರ್ಯಕ್ರಮ  'Udi Tumbuva' ceremony for Goddess Dyamavva in Neelagunda village


ಗದಗ, ಸೆ. 8: ತಾಲ್ಲೂಕಿನ ನೀಲಗುಂದ ಗ್ರಾಮದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದಂದು ವೀರಭದ್ರೇಶ್ವರ ರಥೋತ್ಸವ ಹಾಗೂ ಮಂಗಳವಾರದಂದು ದ್ಯಾಮವ್ವ ದೇವಿಗೆ ಉಡಿ ತುಂಬುವ ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಿತು.  ಗ್ರಾಮದ ಮಹಿಳೆಯರು ಸೇರಿದಂತೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.