*ಸವದತ್ತಿ: ಸಡಗರದ ಶ್ರೀ ದುರ್ಗಾದೇವಿ ಮೂರ್ತಿ ಮೆರವಣಿಗೆ - ಶಾಸಕ ವಿಶ್ವಾಸ ವೈದ್ಯ ಭಾಗಿ*
*Savadatti: Sri Durga Devi idol procession in Sadagara - MLA Vishwas Vaidya participates*
ಸವದತ್ತಿ 20 : ನಗರದ ಎಪಿಎಂಸಿ ಸರ್ಕಲ್ ದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ದುರ್ಗಾದೇವಿಯ ಭವ್ಯ ಮೂರ್ತಿ ಮೆರವಣಿಗೆಯು ಭಕ್ತಾದಿಗಳ ಜಯಘೋಷ ಹಾಗೂ ಮಂಗಲ ವಾದ್ಯಗಳೊಂದಿಗೆ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಈ ಭಕ್ತಿಪೂರ್ವಕ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ವಿಶ್ವಾಸ ವೈದ್ಯ ಅವರು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು. ಮಂಗಲ ವಾದ್ಯಗಳು ಮತ್ತು ಭಕ್ತರ ಹರ್ಷೋದ್ಗಾರಗಳ ನಡುವೆ ದುರ್ಗಾದೇವಿಯ ಮೂರ್ತಿಯನ್ನು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಆ ಸರ್ವಶಕ್ತಿ ದೇವಿಯು ನಾಡಿನ ಸಮಸ್ತ ಜನತೆಗೆ ಸುಖ, ಶಾಂತಿ ಮತ್ತು ಸಮೃದ್ಧಿಯನ್ನು ಕರುಣಿಸಲಿ" ಎಂದು ಪ್ರಾರ್ಥಿಸಿದರು. ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾದಿಗಳ ಶ್ರದ್ಧೆ ಮತ್ತು ಭಕ್ತಿ ಕಾರ್ಯಕ್ರಮದ ಕಳೆಯನ್ನು ಹೆಚ್ಚಿಸಿತ್ತು ಈ ವೇಳೆ ಊರಿನ ಹಿರಿಯರು ಹಾಗೂ ಪ್ರಮುಖ ಮುಖಂಡರು ಯುವಕರು, ಮಕ್ಕಳು ಸೇರಿ ಶಾಸಕರೊಂದಿಗೆ ಹೆಜ್ಜೆ ಹಾಕಿ ದೇವಿಯ ಆಶೀರ್ವಾದ ಪಡೆದರು.ದೇವಿಯ ಈ ಭವ್ಯ ಮೆರವಣಿಗೆಯಲ್ಲಿ ಭಕ್ತಾದಿಗಳೊಂದಿಗೆ ಸೇರಿ ಪಾಲ್ಗೊಂಡ ಕ್ಷಣಗಳು ಮನಸ್ಸಿಗೆ ನೆಮ್ಮದಿ ನೀಡಿದವು. ತಾಯಿ ದುರ್ಗಾದೇವಿಯು ಎಲ್ಲರಿಗೂ ಆಯುರಾರೋಗ್ಯ ನೀಡಲಿ ಎಂದು ಹೇಳಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 