“ಗಣಕ ಜೀವಶಾಸ್ತ್ರ ಮತ್ತು ಅಣು ಜೀವಶಾಸ್ತ್ರ ತಂತ್ರಗಳು”
ಲೋಕದರ್ಶನ ವರದಿ
ವಿಜಯಪುರ 05: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಜೈವಿಕ ಮಾಹಿತಿ ವಿಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ವಿಭಾಗ ಮತ್ತು ಕರ್ನಾಟಕ ಸರ್ಕಾರದ ಪ್ರಾಯೋಜಿತ ವಿಜ್ಞಾನ ಹಾಗೂ ತಂತ್ರಜ್ಞಾನ ದೃಷ್ಟಿ ಸಮೂಹ ಸಹಯೋಗದಲ್ಲಿ ಇದೇ 6 ರಂದು “ಗಣಕ ಜೀವಶಾಸ್ತ್ರ ಮತ್ತು ಅಣು ಜೀವಶಾಸ್ತ್ರ ತಂತ್ರಗಳು” ಕುರಿತ ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಬೆ. 10 ಗಂಟೆಗೆ ಆಯೋಜಿಸಲಾಗಿದೆ.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ವಿಜಯಪುರದ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅರುಣ ಸಿ. ಇನಾಮದಾರ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಪ್ರೊ, ವಿಜಯಾ ಬಿ ಕೋರಿಶೆಟ್ಟಿ ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಬಿ.ಎಲ್ ಲಕ್ಕಣನವರ, ಮತ್ತು ಆರ್ಥಿಕ ಅಧಿಕಾರಿ ರಾಮಣ್ಣ ಅಥಣಿ, ಉಪಸ್ಥಿತರಿರಲಿದ್ದಾರೆ ಎಂದು ಕಾರ್ಯಕ್ರಮದ ಸಂಯೋಜಕರಾದ ಡಾ. ಬಾಬು ಆರ್. ಎಲ್. ಹಾಗೂ ಡಾ. ಜಾಯ್ ಎಚ್. ಹೊಸಕೇರಿ ಅವರು ಮಹಿಳಾ ವಿವಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.