‘ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಲು ಪ್ರೇರಿಪಿಸಬೇಕು’
'Children should be encouraged to engage in extracurricular activities'
ರಾಯಬಾಗ 28: ಪಾಲಕರು ತಮ್ಮ ಮಕ್ಕಳನ್ನು ಮೊಬೈಲ್‌ಗಳಿಂದ ದೂರವಿಟ್ಟು, ಅವರಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಲು ಪ್ರೇರಿಪಿಸಬೇಕೆಂದು ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸೇರೊಟ್ಟಿ ಹೇಳಿದರು.
ಭಾನುವಾರ ಪಟ್ಟಣದ ಮಹಾವೀರ ಭವನದಲ್ಲಿ ಹಮ್ಮಿಕೊಂಡಿದ್ದ ಮಹಾವೀರ ವಸತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೋಧಕರು ವಿದ್ಯಾರ್ಥಿಗಳಿಗೆ ಒಳ್ಳೆ ಶಿಕ್ಷಣದೊಂದಿಗೆ ಒಳ್ಳೆಯ ಸಂಸ್ಕಾರ, ಸಂಸ್ಕೃತಿ ನೀಡಬೇಕೆಂದರು.
ಸಂಸ್ಥೆ ಅಧ್ಯಕ್ಷ ಡಿ.ಎಮ್.ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಬೆಳಗಾವಿ ಭರತೇಶ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ವಿನೋದ ದೊಡ್ಡನವರ, ಉಪನ್ಯಾಸಕ ಶೀತಲ ಅಸ್ಕಿ, ಅರಿಹಂತ ಚಾರಿಟೇಬಲ್ ಅಧ್ಯಕ್ಷ ಡಿ.ಸಿ.ಸದಲಗಿ, ಪ್ರಾಚಾರ್ಯ ಆಶಾರಾಣಿ ಪಟ್ಟನಕೊಡಿ, ಡಿವಾಯ್‌ಎಸ್‌ಪಿ ಬಿ.ಎಸ್.ಮಂಟೂರ, ವಕೀಲರ ಸಂಘದ ಅಧ್ಯಕ್ಷ ಕೆ.ಆರ್.ಕೋಟಿವಾಲೆ, ಡಾ.ಅಜೀತ ನಾಯಿಕ, ಸತ್ಯಕುಮಾರ ಬಿರಾಜ, ಶೀತಲ ಬೇಡಕಿಹಾಳೆ, ಡಿ.ಎಚ್.ಯಲ್ಲಟ್ಟಿ ಸೇರಿ ಅನೇಕರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 