’ಕಾರ್ಖಾನೆ ವಿಷಯದಲ್ಲಿ ಜನರನ್ನು ತಪ್ಪು ದಾರಿಗೆ ಎಳೆಯಬೇಡಿ’ಕಾಂಗ್ರೆಸ್ ಸರಕಾರ ಕಿತ್ತೆಗೆಯಲು ಕಾರ್ಯಕರ್ತರಿಗೆ ನಿಖಿಲ್ ಕುಮಾರಸ್ವಾಮಿ ಕರೆ
'Don't mislead people on factory issue' Nikhil Kumaraswamy calls on activists to remove Congress go
ಕೊಪ್ಪಳ 04: ಕೊಪ್ಪಳದಲ್ಲಿ ಕೈಗಾರಿಕೆಗಳು ಸೃಷ್ಟಿಸಿರುವ ಸಮಸ್ಯೆಗಳಿಗೆ ಕೇಂದ್ರ ಸರಕಾರವನ್ನು ದೂರುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುವುದನ್ನು ಕಾಂಗ್ರೆಸ್ ಪಕ್ಷ ಈ ಕೂಡಲೇ ನಿಲ್ಲಿಸಬೇಕೆಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ಪಕ್ಷದ ರಜತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ’ಜನರೊಂದಿಗೆ ಜನತಾದಳ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು."ಕುಮಾರಸ್ವಾಮಿಯವರು ಕೇಂದ್ರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿದ್ದಾರೆ. ಕೊಪ್ಪಳದ ಸಮುದಾಯಗಳ ಆರೋಗ್ಯ ಹಾಗೂ ಪರಿಸರಕ್ಕೆ ಹಾನಿಯನ್ನುಂಟು ಮಾಡುತ್ತಿರುವ ಕಾರ್ಖಾನೆಗಳ ವಿಷಯ ಕುಮಾರಸ್ವಾಮಿಯವರ ಖಾತೆಗೆ ಬರುತ್ತದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರು ಸುಳ್ಳು ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ.
ವಾಸ್ತವದಲ್ಲಿ ಕಾರ್ಖಾನೆಗಳ ವಿಷಯಕ್ಕೂ ಕುಮಾರಸ್ವಾಮಿ ಅವರು ನಿರ್ವಹಿಸುತ್ತಿರುವ ಖಾತೆಗೂ ಸಂಬಂಧವೇ ಇಲ್ಲ. ಕೈಗಾರಿಕಗಳಿಗೆ ಪರವಾನಿಗೆ ಕೊಡುವ ಹಾಗೂ ಕಾನೂನು ಉಲ್ಲಂಘನೆ ಗಳಿಗೆ ಕ್ರಮ ಜರುಗಿಸುವ ಜವಾಬ್ದಾರಿ ರಾಜ್ಯ ಸರಕಾರದ್ದು. ಸ್ಥಳೀಯ ಶಾಸಕರು, ಸಂಸದರು, ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು ಹಾಗೂ ಕೈಗಾರಿಕೆಗಳ ಆಡಳಿತ ಮಂಡಳಿಯ ಸದಸ್ಯರು ಕೈಜೋಡಿಸಿ ಕೊಪ್ಪಳದ ಜನರ ಹಿತವನ್ನು ಬಳಿ ಕೊಟ್ಟಿದ್ದಾರೆ. ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಕಿಡಿಕಾರಿದರು."ರಾಜ್ಯದಲ್ಲಿ 2.85 ಲಕ್ಷ ಸರಕಾರಿ ಹುದ್ದೆಗಳು ಖಾಲಿ ಇವೆ. ದಲಿತ ಸಮುದಾಯಗಳ ಅಭಿವೃದ್ಧಿಗಾಗಿ ಮೀಸಲಿಟ್ಟ 37,0000 ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಕಾರ್ಯಕ್ರಮಗಳಿಗೆ ಬಳಸಿಕೊಳ್ಳಲಾಗಿದೆ.
ಈ ಯೋಜನೆಗಳ ಹೆಸರಿನಲ್ಲಿ ಮಹಿಳೆಯರಿಗೆ ಮತ್ತು ಯುವಕರಿಗೆ ಮೋಸ ಮಾಡಲಾಗುತ್ತಿದೆ. ಪ್ರತಿ ವರ್ಷ ಒಂದು ಲಕ್ಷ ಕೋಟಿ ರೂಪಾಯಿಗಳನ್ನುಸಾಲ ಮಾಡುತ್ತಿದೆ. ತುಂಗಭದ್ರಾ ಆಣೆಕಟ್ಟು ಕ್ರೆಸ್ಟ್ ಗೇಟ್ ರಿಪೇರಿ ಮಾಡಿದ ಗುತ್ತಿಗೆದಾರರಿಗೆ ಪಾವತಿಸಲು ಹಾಗೂ ರಸ್ತೆಯಲ್ಲಿರುವ ಗುಂಡಿಯನ್ನು ಮುಚ್ಚಲು ಸಹ ಸರಕಾರದ ಬಳಿ ಹಣವಿಲ್ಲ. ಕಳೆದ ಮೂರು ವರ್ಷಗಳಲ್ಲಿ 2,800 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪರಿಹಾರವನ್ನೇ ಕೊಟ್ಟಿಲ್ಲ. ವಾಲ್ಮೀಕಿ ನಿಗಮದಲ್ಲಿ ಹಗರಣ ಆಗಿರುವುದು ನಿಜ ಎಂದು ಸ್ವತಃ ಮುಖ್ಯಮಂತ್ರಿಯವರೇ ವಿಧಾನಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಸರಕಾರಿ ನೌಕರರಿಂದ ಲಂಚ ಪಡೆದು ವರ್ಗಾವಣೆ ಮಾಡಲಾಗುತ್ತಿದೆ. ಇಂತಹ ದುರಾಡಳಿತ ನಡೆಸಿದ ಪಕ್ಷ ರಾಜ್ಯದ ಇತಿಹಾಸದಲ್ಲಿಯೇ ಇಲ್ಲ," ಎಂದು ಆರೋಪಿಸಿದರು.
ಕಳೆದ 25 ವರ್ಷಗಳಲ್ಲಿ ನಮ್ಮ ಪಕ್ಷದಿಂದ ಆಯ್ಕೆಯಾಗಿ ಪಕ್ಷ ಬಿಟ್ಟು ಹೋದ ಶಾಸಕರ ಸಂಖ್ಯೆ 54. ನಾಯಕರು ಪಕ್ಷ ಬಿಟ್ಟರೂ ಕಾರ್ಯಕರ್ತರು ಪಕ್ಷ ಬಿಟ್ಟಿಲ್ಲ. ಈಗಾಗಲೇ 61 ವಿಧಾನಸಭಾ ಕ್ಷೇತ್ರಗಳಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ರಜತ ಮಹೋತ್ಸವದ ಅಂಗವಾಗಿ ಎರಡೂ ಬೃಹತ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿನ ಪಕ್ಷದ ಸಾಧನೆ ಮುಂದಿನ ವಿಧಾನಸಭಾ ಚುನಾವಣೆಯ ದಿಕ್ಕನ್ನು ನಿರ್ಧರಿಸುತ್ತದೆ. ಮುಂದಿನ ಚುನಾವಣೆಯಲ್ಲಿ ಕೊಪ್ಪಳದಲ್ಲಿ ಸಿ ವಿ ಚಂದ್ರಶೇಖರ್ ಶಾಸಕರಾಗಿ ಆಯ್ಕೆಯಾಗುವುದು ನಿಶ್ಚಿತ ಎಂದು ಹೇಳಿದರು."ಮುಖ್ಯಮಂತ್ರಿ ಆಗಿದ್ದಾಗ ಕುಮಾರಸ್ವಾಮಿಯವರು 27, 000 ಕೋಟಿ ರೂಪಾಯಿ ಬೆಳೆ ಸಾಲ ಮನ್ನಾ ಮಾಡಿದ್ದಾರೆ.
ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ಒದಗಿಸಿದ್ದು, ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಿದ್ದು ಜೆಡಿಎಸ್ ಸರಕಾರ. ಜೆಡಿಎಸ್ ಪಕ್ಷ ಅಲ್ಪಸಂಖ್ಯಾತ ಸಮುದಾಯದ ಹಿತ ಕಾಪಾಡಿದೆ. ಆದರೆ ಆ ಸಮುದಾಯವನ್ನು ಕಾಂಗ್ರೆಸ್ ಪಕ್ಷ ವೋಟ್ ಬ್ಯಾಂಕ್ ಆಗಿ ಪರಿವರ್ತಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬದುಕಿದೆಯೋ ಅಥವಾ ಸತ್ತಿದೆಯೋ ಎಂಬುದು ಯಾರಿಗೂ ಗೊತ್ತಿಲ್ಲ. ಕಾರ್ಖಾನೆಗಳಿಗೆ ಶರಣಾಗಿರುವ ಕೊಪ್ಪಳದ ಶಾಸಕ ಮತ್ತು ಸಂಸದರನ್ನು ಮನೆಗೆ ಕಳುಹಿಸಬೇಕು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಒಕ್ಕೂಟ ಕರ್ನಾಟಕದಲ್ಲಿ 150ಕ್ಕೂ ಹೆಚ್ಚು ಸೀಟ್ ಗೆಲ್ಲುವುದು ಶತಸಿದ್ಧಃ," ಎಂದು ಮಾಜಿ ಸಚಿವ ವೆಂಕಟರಾವ್ ನಾಡಗೌಡ ಹೇಳಿದರು.ಕೊಪ್ಪಳದಲ್ಲಿ ಪಕ್ಷ ಬಲಿಷ್ಠವಾಗಿದೆ. ಅಲ್ಪಸಂಖ್ಯಾತ ವರ್ಗದವರು ಜೆಡಿಎಸ್ ಪಕ್ಷವನ್ನು ದೊಡ್ಡ ಪ್ರಮಾಣದಲ್ಲಿ ಬೆಂಬಲಿಸುತ್ತಿದ್ದಾರೆ.
ಬೂತ್ ಮಟ್ಟದಲ್ಲಿ ನಮ್ಮ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕಿದೆ. ಗ್ಯಾರೆಂಟಿ ಯೋಜನೆಗಳಿಗಾಗಿ ಬೆಲೆ ಏರಿಕೆಯಲ್ಲಿ ತೊಡಗಿರುವ ಕಾಂಗ್ರೆಸ್ ಸರಕಾರ ನಮಗೆ ಬೇಡ ಎಂದು ಜಿಲ್ಲಾಧ್ಯಕ್ಷ ಸುರೇಶ್ ಭೂಮರೆಡ್ಡಿ ಹೇಳಿದರು."ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ 60,000 ಸದಸ್ಯತ್ವ ಗುರಿ ಹಮ್ಮಿಕೊಳ್ಳಲಾಗಿದೆ. ಪ್ರಮುಖ ನಾಯಕರು ಕಾರ್ಖಾನೆಗಳಿಂದ ಸಮಸ್ಯೆಗೀಡಾಗಿರುವ ಹಳ್ಳಿಗಳಿಗೆ ಶೀಘ್ರವೇ ಭೇಟಿ ನೀಡಲಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು ಕೊಪ್ಪಳದ ಸಮಸ್ಯೆಯನ್ನು ತಮ್ಮ ತಂದೆಯವರ ಗಮನಕ್ಕೆ ಮತ್ತೊಮ್ಮೆ ತರಬೇಕು," ಎಂದು ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಹೇಳಿದರು.ಹಗರಿಬೊಮ್ಮನಹಳ್ಳಿ ಶಾಸಕ ನೀಮಿರಾಜ್ ನಾಯಕ್ ಹಾಗೂ ರೈತರ ಸಾಲ ಮನ್ನಾ ಯೋಜನೆಯ ಫಲಾನುಭವಿ ರೈತ ವಸಂತ್ ಕರಿಗಾರ್ ಮಾತನಾಡಿದರು.ಅಲ್ಪಸಂಖ್ಯಾತ ಸಮುದಾಯದ ನೂರಾರು ಯುವಕರು ನಿಖಿಲ್ ಕುಮಾರಸ್ವಾಮಿ ಅವರಿಂದ ಧ್ವಜ ಪಡೆಯುವ ಮೂಲಕ ಜೆಡಿಎಸ್ ಪಕ್ಷ ಸೇರೆ್ಡಗೊಂಡರು.
ತಾಲೂಕ ಜೆಡಿಎಸ್ ಗೌರವಾಧ್ಯಕ್ಷ ಈಶಪ್ಪ ಮಾದಿನೂರು, ರಾಜ್ಯ ಘಟಕದ ಕಾರ್ಯಾಧ್ಯಕ್ಷ ರಾಜು ನಾಯಕ, ಜಿಲ್ಲಾ ವಕ್ತಾರಮಲ್ಲನಗೌಡ ಕೋನಗೌಡ್ರ, ಜಿಲ್ಲಾ ಉಪಾಧ್ಯಕ್ಷ ಮೂರ್ತೆಪ್ಪ ಗಿಣಿಗೇರಿ, ಜಿಲ್ಲಾ ಸಂಸ್ಕೃತಿ ವಿಭಾಗದ ಅಧ್ಯಕ್ಷ ಮಂಜುನಾಥ ಸೊರಟೂರ್, ಜಿಲ್ಲಾ ಎಸ್ ಟಿ ಘಟಕ ಅಧ್ಯಕ್ಷ ರಮೇಶ ಡಂಬ್ರಳ್ಳಿ, ಜಿಲ್ಲಾ ಎಸ್ ಸಿ ಘಟಕ ಅಧ್ಯಕ್ಷ ಶಾಂತಪ್ಪ ದೊಡ್ಡಮನಿ, ಯಲಬುರ್ಗ ತಾಲೂಕು ಜೆಡಿಎಸ್ ಅಧ್ಯಕ್ಷಬಸವರಾಜ ಗುಳಗುಳಿ, ಕುಷ್ಟಗಿ ತಾಲೂಕು ಅಧ್ಯಕ್ಷರ ಶರಣಪ್ಪ ಕುಂಬಾರ, ಕೊಪ್ಪಳ ತಾಲೂಕು ಅಧ್ಯಕ್ಷ ವಿರೇಶಗೌಡ್ರ ದಳಪತಿ, ಕೂಕನೂರು ತಾಲೂಕು ಅಧ್ಯಕ್ಷ ಕೆಂಚಪ್ಪ ಹಳ್ಳಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 