ವಿಶ್ವಾಸವನ್ನು ಬೆಳೆಸಲು ‘ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಸಹಾಯಕ: ಪಿಎಸ್‌ಐ ಮಾಳಿ
'Door-to-door police program' helps build trust: PSI Mali
ವಿಶ್ವಾಸವನ್ನು ಬೆಳೆಸಲು ‘ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಸಹಾಯಕ: ಪಿಎಸ್‌ಐ ಮಾಳಿ
ಯರಗಟ್ಟಿ 05: ಕರ್ನಾಟಕ ಸರ್ಕಾರವು ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ನಿರ್ಮಿಸುವ ಮಹತ್ತರ ಉದ್ದೇಶದಿಂದ ‘ಮನೆ ಮನೆಗೆ ಪೊಲೀಸ್’ ಎಂಬ ವಿನೂತನ ಯೋಜನೆಯನ್ನು ಪ್ರಾರಂಭಿಸಿದೆ. ಸಾರ್ವಜನಿಕರು ಮತ್ತು ಪೊಲೀಸರ ನಡುವೆ ಭ್ರಾತೃತ್ವ ಮತ್ತು ವಿಶ್ವಾಸವನ್ನು ಬೆಳೆಸಲು ಇದು ಸಹಾಯಕವಾಗಲಿದೆ. ಪೊಲೀಸ್ ಅಧಿಕಾರಿಗಳು ತಮ್ಮ ಸ್ಥಳೀಯ ಪ್ರದೇಶದ ಪ್ರತಿ ಮನೆಗೂ ಭೇಟಿ ನೀಡಿ, ನಿವಾಸಿಗಳೊಂದಿಗೆ ಸೌಹಾರ್ದಯುತ ಸಂಬಂಧ ಬೆಳೆಸುತ್ತಾರೆ. ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುತ್ತಾರೆ ಮತ್ತು ಸುರಕ್ಷತೆ ಹಾಗೂ ಭದ್ರತಾ ಕ್ರಮಗಳ ಬಗ್ಗೆ ಮಾರ್ಗದರ್ಶನ ನೀಡುತ್ತಾರೆ ಎಂದು ಪಿಎಸ್‌ಐ ಎಲ್. ಬಿ. ಮಾಳಿ ಹೇಳಿದರು. ಸಮೀಪದ ಮುಗಳಿಹಾಳ ಗ್ರಾಮದಲ್ಲಿ ಮನೆ ಮನೆಗೆ ಪೊಲೀಸ್’ ಎಂಬ ವಿನೂತನ ಯೋಜನೆಯ ಜಾಗೃತಿ ಕಾರ್ಯಕ್ರಮವನ್ನು ಮುರಗೋಡ ಸಿಪಿಐ ಆಯ್. ಎಂ. ಮಠಪತಿಯವರ ಆದೇಶದ ಮೇರೆಗೆ ಗ್ರಾಮಸ್ಥರಿಗೆ ಮೂಡಿಸಿದರು. ಈ ಸಂದರ್ಭದಲ್ಲಿ ನಿಂಗಪ್ಪ ದಳವಾಯಿ, ಯಲ್ಲಪ್ಪ ದಳವಾಯಿ, ಬಸವರಾಜ ದಳವಾಯಿ, ಸಿದ್ದು ಬಡಿಗೇರ, ಮಾರುತಿ ಮಾದರ, ಈರ್ಪ ನಾವಿ, ಚಂಬಣ್ಣ ಗಾಣಿಗೇರ, ವಿಠ್ಠಲ ದಳವಾಯಿ, ಗ್ರಾಮದ ಬೀಟ್ ಪೋಲಿಸ್ ವಿಠ್ಠಲ ಬಾಂಗಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 