'ಗೊಂದಲಕ್ಕೆ ಅವಕಾಶ ಕೊಡದೇ ಮತ ಎಣಿಕೆ ಕಾರ್ಯದಲ್ಲಿ ಎಚ್ಚರಿಕೆವಹಿಸಿ'
ಕೊಪ್ಪಳ 16: ಲೋಕಸಭಾ ಸಾರ್ವತ್ರಿಕ ಚುನಾವಣೆಯ ನಿಮಿತ್ತ ಮೇ. 23 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆಗಾಗಿ ನಿಯೋಜಿಸಲಾದ ಅಧಿಕಾರಿಗಳು, ಯಾವುದೇ ಗೊಂದಲಕ್ಕೆ ಅವಕಾಶ ಕೊಡದಂತೆ ಮತ ಎಣಿಕೆ ಕಾರ್ಯದಲ್ಲಿ ಎಚ್ಚರಿಕೆ ವಹಿಸಬೇಕೆಂದು ಕೊಪ್ಪಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಹೇಳಿದರು.
ಅವರು (ಮೇ.16) ಸೆಕ್ಟರ್ ಅಧಿಕಾರಿಗಳು, ಮತ ಎಣಿಕೆ ಮೇಲ್ವಿಚಾರಕರು ಹಾಗೂ ಮತ ಎಣಿಕೆ ಸಹಾಯಕ ಅಧಿಕಾರಿಗಳಿಗೆ ಮತ ಎಣಿಕೆ ಕಾರ್ಯದ ಕುರಿತು ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಗುರುವಾರದಂದು ಹಮ್ಮಿಕೊಳ್ಳಲಾಗಿದ್ದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ-2019 ರ ನಿಮಿತ್ತ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಫಲಿತಾಂಶವು ಮೇ. 23 ರಂದು ಬರಲಿದ್ದು, ಮತ ಏಣಿಕಾ ಕಾರ್ಯವನ್ನು ನಗರದ ಗವಿಸಿದ್ದೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ನಡೆಸಲಾಗುವುದು. ಮತ ಎಣಿಕೆ ಕಾರ್ಯದಲ್ಲಿ ಆಯೋಗವು ನೀಡಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಈಗಾಗಲೆ ಮತ ಎಣಿಕೆ ಕೇಂದ್ರ ಸಜ್ಜುಗೊಂಡಿದೆ. ವಿಧಾನಸಭಾ ಕ್ಷೇತ್ರಗಳವಾರು ಮತ ಎಣಿಕೆ ನಡೆಯಲಿದೆ. ಅಲ್ಲದೆ ಇವಿಎಂ ಸ್ಟ್ರಾಂಗ್ ರೂಮ್ಗಳನ್ನು ಸ್ಥಾಪಿಸಲಾಗಿದೆ. ಮತ ಎಣಿಕಾ ಕೇಂದ್ರದಲ್ಲಿ ಮೀಡಿಯಾ ಸೆಂಟರ್, ಪೊಲೀಸ್ ವೇಟಿಂಗ್ ರೂಂ, ವೀಕ್ಷಕರ ಕೊಠಡಿ, ಹಾಗೂ ಡಿ.ಇ.ಓ ರೂಮ್ಗಳನ್ನು ಸಹ ನಿಗದಿಪಡಿಸಲಾಗಿದೆ. ವಿಧಾನಸಭಾ ಕ್ಷೇತ್ರವಾರು ಮತ ಎಣಿಕೆ ಮೇಲ್ವಿಚಾರಕರು ಹಾಗೂ ಮತ ಎಣಿಕೆ ಸಹಾಯಕರನ್ನು ನೇಮಿಸಲಾಗುವುದು. ಮತ ಎಣಿಕೆಗಾಗಿ ಅಗತ್ಯ ಟೇಬಲ್ಗಳ ವ್ಯವಸ್ಥೆ ಮಾಡಲಾಗುವುದು. ಮತ ಎಣಿಕೆ ಕಾರ್ಯವು ಸುಗಮವಾಗಿ ನಡೆಯಬೇಕಾಗಿದ್ದು, ಮತ ಎಣಿಕಾ ಕಾರ್ಯಕ್ಕಾಗಿ ನಿಯೋಜಿಸಲಾದ ಅಧಿಕಾರಿಗಳು ಮೇ. 23 ರಂದು ಬೆಳಿಗ್ಗೆ 5 ಗಂಟೆಗೆ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಿ, ಬೆಳಿಗ್ಗೆ 5-30ಕ್ಕೆ ವರದಿ ಮಾಡಿಕೊಳ್ಳಬೇಕು. ತಮಗೆ ಹಂಚಿಕೆಯಾದ ವಿಧಾನಸಭಾ ಕ್ಷೇತ್ರದ ಮಾಹಿತಿ ಹಾಗೂ ಟೇಬಲ್ ಸಂಖ್ಯೆಯನ್ನು ತಿಳಿದುಕೊಳ್ಳಬೇಕು. ಮತಯಂತ್ರಗಳ ಪ್ರಕಾರ ದಾಖಲಾದ ಮತಗಳ ಸಂಖ್ಯೆ, ಚಲಾವಣೆಯಾದ ಮತಗಳು ಇತ್ಯಾದಿಗಳ ವಿವರವನ್ನು ಪಡೆಯಬೇಕು.
ಎಣಿಕೆ ದಿನ ಮೊದಲಿಗೆ ಬೆಳಿಗ್ಗೆ 08 ಗಂಟೆಗೆ ಸರಿಯಾಗಿ ಪೋಸ್ಟಲ್ ಮತಗಳ ಎಣಿಕೆ ಪ್ರಾರಂಭಗೊಂಡು, ಉಳಿದಂತೆ ಮತಗಟ್ಟೆಗಳಲ್ಲಿ ಇವಿಎಂ ಮೂಲಕ ದಾಖಲಾದ ಮತಗಳ ಎಣಿಕೆ ಕಾರ್ಯ ಪ್ರಾರಂಭವಾಗುತ್ತದೆ. ಮತ ಎಣಿಕೆ ಕಾರ್ಯದಲ್ಲಿ ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿಯನ್ನ ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ತೊಂದರೆ ಉಂಟಾದಲ್ಲಿ ಕೂಡಲೇ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಹೇಳಿದರು.
ಸೆಕ್ಟರ್ ಅಧಿಕಾರಿಗಳು, ಮತ ಎಣಿಕೆ ಮೇಲ್ವಿಚಾರಕರು ಹಾಗೂ ಮತ ಎಣಿಕೆ ಸಹಾಯಕ ಅಧಿಕಾರಿಗಳಿಗೆ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂತರ್ಿ ದೇಸಾಯಿರವರು ಮತ ಎಣಿಕೆ ಕಾರ್ಯದ ಕುರಿತು ಸಂಪೂರ್ಣ ವಿವರವನ್ನು ನೀಡಿದರು. ಅಲ್ಲದೆ ಮತ ಎಣಿಕೆ ಕಾರ್ಯದ ಬಗ್ಗೆ ಪ್ರಾತ್ಯಕ್ಷತೆ ಮೂಲಕ ವಿವರಿಸಿದರು. ಅಪರ ಜಿಲ್ಲಾಧಿಕಾರಿ ಬಾಲಚಂದ್ರ, ಉಪವಿಭಾಗಾಧಿಕಾರಿ ಸಿಡಿ ಗೀತಾ ಸೇರಿದಂತೆ ಸಹಾಯಕ ಚುನಾವಣಾಧಿಕಾರಿಗಳು ಉಪಸ್ಥಿತರಿದ್ದರು. ತರಬೇತಿಯಲ್ಲಿ ಚುನಾವಣಾ ಮತ ಎಣಿಕೆಗೆ ನಿಯೋಜನೆಗೊಂಡಿರುವ ಮತ ಎಣಿಕೆ ಮೇಲ್ವಿಚಾರಕರು ಹಾಗೂ ಮತ ಎಣಿಕೆ ಸಹಾಯಕರು ಪಾಲ್ಗೊಂಡಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 