ಬೆಳಗಾವಿಯಲ್ಲಿ ಮುಂದುವರೆದ ಮಳೆಯ ಅರ್ಭಟ : ನದಿ ಪಾತ್ರದ ಗ್ರಾಮಗಳಲ್ಲಿ ಮತೆ ಪ್ರವಾಹದ ಭೀತಿ, ಮೈದುಂಬಿ ಹರಿಯುತ್ತಿದೆ ಗೋಕಾಕ ಜಲಪಾತ
ಬೆಳಗಾವಿ, ಸೆ, 14 : ಕಳೆದ ನಾಲ್ಕು ದಿನಗಳಿಂದ ನೆರೆಯ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಅರಣ್ಯ ಪ್ರದೇಶಗಳಲ್ಲಿ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಜಿಲ್ಲೆಯ ಪ್ರಮುಖ ನದಿಗಳು ಅಪಾಯ ಮಟ್ಟ ಮೋರಿ ಹರಿಯುತ್ತಿದ್ದು, ಜಿಲ್ಲೆಯ ಸುಮಾರು 17 ಸೇತುವೆಗಳು ಮುಳಗಡೆಯಾಗಿವೆ.

ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ಪ್ರಮುಖ ನದಿಗಳಾದ ಕೃಷ್ಣ, ಘಟಪ್ರಭಾ, ಮಲಪ್ರಭಾ, ಹಿರಣ್ಯಕೇಶಿ ನದಿಗಳು ಅಪಯಮಟ್ಟವನ್ನು ಮೀರಿ ಹರಿಯುತ್ತಿವೆ. ಇದರಿಂದ ಮತ್ತೆ ಬೆಳಗಾವಿ ಜಿಲ್ಲೆಯ ನದಿ ಪಾತ್ರದ ಜನರಿಗೆ ನೆರೆ ಉಂಟಾಗುವ ಭೀತಿ ಎದುರಾಗಿದೆ.

ಮಹಾರಾಷ್ಟ್ರದ ಚಂದಗಡ ಪ್ರದೇಶದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯ ಅರ್ಭಟಕ್ಕೆ ಘಟಪ್ರಭಾ ನದಿ ನೀರಿನ ಒಳಹರಿವು ಹೆಚ್ಚಾಗಿದ್ದು, ಹಿಡಕಲ್ ಜಲಾಶಯದ ಸಾವಿರಾರು ಕ್ಯೂ ಸೆಕ್ಸ್ ನೀರನ್ನು ನೀರನ್ನು ಹೊರಬಿಡಲಾಗಿದೆ. ಇದರಿಂದ ವಿಶ್ವವಿಖ್ಯಾತ ಗೋಕಾಕ ಜಲಪಾತವು ಮೈದುಂಬಿ ಹರಿಯುತ್ತಿದ್ದು ನೋಡುಗರನ್ನು ಆಕರ್ಷಿಸುತ್ತಿದೆ.

ಅತ್ತ ಖಾನಾಪೂರ ತಾಲೂಕಿನ ಕಣಕುಂಬಿ ಪ್ರದೇಶದಲ್ಲಿ ಹಾಗೂ ಮಹಾರಾಷ್ಟ್ರದ ಅಂಬೋಲಿ ಮತ್ತು ಅಜರಾ ಪ್ರದೇಶದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಮಲಪ್ರಭಾ ಮತ್ತು ಹಿರಣ್ಯಕೇಶಿ ನದಿಗಳು ಅಪಾಯಮಟ್ಟವನ್ನು ಮೀರಿ ಹರಿಯುತ್ತಿವೆ.
ಅದರಂತೆ ಜಿಲ್ಲೆಯ ಹಿರಿಹೋಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕೃಷ್ಣ ನದಿಯು ಕೂಡಾ ಅಪಾಯಮಟ್ಟದಲ್ಲಿ ಹರಿಯುತ್ತಿದ್ದು, ಚಿಕ್ಕೋಡಿ, ಅಥಣಿ ರಾಯಬಾಗ ತಾಲೂಕಿನ ನದಿ ಪಾತ್ರದಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಮುಳುಗಡೆಯಾಗಿರುವ ಸೇತುವೆಗಳ ಬಳಿಯಲ್ಲಿ ಪೊಲೀಸ ಸಿಬ್ಬಂದಿಗಳನ್ನು ನಿಯೋಜನೆ ಮಾಡುವ ಮೂಲಕ ರಸ್ತೆಗಳಿಗೆ ಬ್ಯಾರಿಕೇಡ್ ಗಳನ್ನು ಹಾಕಿ ಮುಂಜಾಗ್ರತೆಯನ್ನು ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಸಂಜೀವ ಪಾಟೀಲ ತಿಳಿಸಿದ್ದಾರೆ.