ವಿಶ್ವಸಂಸ್ಥೆ ಸಭೆಯನ್ನುದ್ದೇಶಿಸಿ ಮೋದಿ ಭಾಷಣ ಸೆ. 26 ರಂದು
ನವದೆಹಲಿ- 2 ವಿಶ್ವಸಂಸ್ಥೆ ಸಾಮಾನ್ಯ ಸಭೆಯನ್ನುದ್ದೇಶಿಸಿ ಇದೆ 26 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಲಿದ್ದಾರೆ . 75 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಾರ್ಷಿಕ ಸಾಮಾನ್ಯ ಸಭೆ ಅಧಿವೇಶವನ್ನು ಆಯೋಜಿಸಲಾಗಿದೆ.
ಈ ಸಭೆಯಲ್ಲಿ ವಿಶ್ವ ನಾಯಕರು ಅಧಿವೇಶನಕ್ಕಾಗಿ ಮೊದಲೇ ರೆಕಾರ್ಡ್ ಮಾಡಿದ ಭಾಷಣದ ವಿಡಿಯೋಗಳನ್ನು ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ಇನ್ನು ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇದೇ . 26 ರಂದು ಸಾಮಾನ್ಯ ಸಭೆಯನ್ನು ಉದ್ದೇಶಿಸಿ ವರ್ಚುವಲ್ ವೇದಿಕೆಯ ಮೂಲಕ ಭಾಷಣ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಾಮಾನ್ಯ ಸಭೆ ಇದೆ . 22 ರಿಂದ ಪ್ರಾರಂಭವಾಗಿ 29 ರ ವರೆಗೆ ನಡೆಯಲಿದೆ. ಇದೆ . 22 ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಂತಿಮ ಭಾಷಣ ಮಾಡುವ ಸಾಧ್ಯತೆ ಇದೆ ಎಂದೂ ಹೇಳಲಾಗಿದೆ.