10ನೇ ಅಖಿಲ ಭಾರತ ವಿದ್ಯಾರ್ಥಿ ಸಮ್ಮೇಳನ ಪೋಸ್ಟರ್ ಬಿಡುಗಡೆ
10ನೇ ಅಖಿಲ ಭಾರತ ವಿದ್ಯಾರ್ಥಿ ಸಮ್ಮೇಳನ ಪೋಸ್ಟರ್ ಬಿಡುಗಡೆ
ಧಾರವಾಡ 22: ನಮ್ಮ ದೇಶದ ನವೋದಯ ಚಳುವಳಿಯ ಮೂಲ ಉದ್ದೇಶ ಎಲ್ಲಾ ಹಳೆಯ ಕಂದಚಾರ, ಮೌಡ್ಯ, ಮತಾಂಧತೆಗಳಿಂದ ಮುಕ್ತಗೊಳಿಸುವುದಾಗಿತ್ತು. ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ನೇತಾಜಿ ಅವರು ರಾಜಕೀಯ, ಆರ್ಥಿಕ, ಸಾಂಸ್ಕೃತಿಕ, ಸಾಮಾಜಿಕವಾಗಿ ಮೂಲಭೂತ ಬದಲಾವಣೆ ತರುವ ಕನಸು ಹೊತ್ತು, ಎಲ್ಲರಿಗೂ ಶಿಕ್ಷಣ, ಆರೋಗ್ಯ, ಉದ್ಯೋಗ ಒದಗಿಸಿ, ಯಾವ ಹೆಣ್ಣು ಮಗುವು ಅಭದ್ರತೆಯಿಂದ ಬಳಲದ ಸಮ ಸಮಾಜವನ್ನು ನಿರ್ಮಿಸುವ ಮಹಾನ್ ಧೈಯದೊಂದಿಗೆ ಹೋರಾಡಿದರು.
ಭಾರತಕ್ಕೆ ಸ್ವಾತಂತ್ರ್ಯ ದೊರೆತು 77 ವರ್ಷಗಳು ಕಳೆದಿವೆ. ಆದರೆ ಇಂದಿಗೂ ಅಸಂಖ್ಯಾತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಕಿತ್ತು ತಿನ್ನುವ ಬಡತನ, ಹಸಿವೆಯಿಂದ ನರಳುತ್ತಿರುವ ಕಂದಮ್ಮಗಳು ಬೀದಿ ಹೆಣವಾಗುತ್ತಿದ್ದಾರೆ. ಬಹುದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳು ಬಾಲ ಕಾರ್ಮಿಕರಾಗಿದ್ದಾರೆ. ಹೀಗೆ ಹತ್ತು ಹಲವು ಸಾಮಾಜಿಕ ಪಿಡುಗುಗಳಿಂದ ದೇಶ ನಲುಗುತ್ತಿದೆ. ಇದುವೇ ನಮ್ಮ ಸ್ವಾತಂತ್ರ್ಯ ಭಾರತದ ಚಿತ್ರಣ! ಸ್ವಾತಂತ್ರ್ಯಾನಂತರ ಅಧಿಕಾರಕ್ಕೆ ಬಂದ ಎಲ್ಲ ಸರ್ಕಾರಗಳು ಶಿಕ್ಷಣಕ್ಕೆ ಅನುದಾನ ಕಡಿತಗೊಳಿಸುತ್ತಾ ಬಂದಿವೆ. ಅಷ್ಟೇ ಅಲ್ಲದೆ ಹಲವಾರು ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಅನುಷ್ಠಾನಗೊಳಿಸುತ್ತಿವೆ. ಈ ಮೂಲಕ ಸಾರ್ವಜನಿಕ ಶಿಕ್ಷಣವನ್ನು ಮೊಟಕುಗೊಳಿಸುವ, ಬಡ ಜನರನ್ನು ಶಿಕ್ಷಣದಿಂದ ದೂರ ತಳ್ಳುವ, ಇಡೀ ದೇಶವನ್ನೇ ಅಜ್ಞಾನದ ಕೂಪಕ್ಕೆ ದೂಡುವ, ಹಾಗೂ ಈ ದೇಶದ ಬಂಡವಾಳಿಗರ ಬೊಕ್ಕಸ ತುಂಬಿಸುವ ನೀತಿಗಳನ್ನು ಕಾಂಗ್ರೆಸ್ ಮೊದಲುಗೊಂಡಂತೆ ಎಲ್ಲ ಪಕ್ಷಗಳು ಜಾರಿಗೊಳಿಸಿವೆ. ಶಿಕ್ಷಣದ ಸಂಪೂರ್ಣ ಖಾಸಗಿಕರಣ, ಕಾರ್ೊರೇಟಿಕರಣದ ದುರುದ್ದೇಶದೊಂದಿಗೆ ಕರಾಳ ಓಇಕ-2020ನ್ನು ಕೇಂದ್ರ ಬಿಜೆಪಿ ಸರ್ಕಾರವು ಜಾರಿಗೊಳಿಸಿತು. ಅಪ್ರಜಾತಾಂತ್ರಿಕವಾಗಿ ಜನರ ಅಭಿಪ್ರಾಯ ಪಡೆಯದೆ ಏಕಪಕ್ಷೀಯವಾಗಿ ಈ ನೀತಿಯನ್ನು ದೇಶದ ಮೇಲೆ ಹೇರಲಾಯಿತು.
ಓಇಕ-2020ನ್ನು ವಿರೋಧಿಸಿ ಂಋಖಓ ದೇಶವ್ಯಾಪಿ ಹೋರಾಟಕ್ಕೆ ಮುಂದಾಯಿತು. ಕರ್ನಾಟಕ ರಾಜ್ಯದ ಅಂದಿನ ಬಿಜೆಪಿ ಸರ್ಕಾರ ದೇಶದಲ್ಲೇ ಮೊದಲು ಎಂಬಂತೆ ತರಾತುರಿಯಲ್ಲಿ ಯಾವುದೇ ಪೂರ್ವತಯಾರಿ ಇಲ್ಲದೆ ಈ ನೀತಿಯನ್ನು ಅನುಷ್ಠಾನಗೊಳಿಸಿತು. ಈ ಶಿಕ್ಷಣ ನೀತಿಯು ಜಾರಿಯಾದ ಮೊದಲ ಹಂತದಲ್ಲೇ 13,800 ಸರ್ಕಾರಿ ಶಾಲೆಗಳನ್ನು ವೀಲೀನೀಕರಣದ ಹೆಸರಿನಲ್ಲಿ ಮುಚ್ಚಲು ಆದೇಶ ಹೊರಡಿಸಿತು. ನಾಲ್ಕು ವರ್ಷದ ಪದವಿಯು ಜಾರಿಯಾಯಿತು. ಶಿಕ್ಷಣದ ಮೇಲಾಗುತ್ತಿರುವ ದಾಳಿಯನ್ನು ಸಹಿಸದ ವಿದ್ಯಾರ್ಥಿಗಳು ಹೋರಾಟಕ್ಕೆ ಮುಂದಾದರು. ಎಐಡಿಎಸ್ಓ ನಾಯಕತ್ವದಡಿಯಲ್ಲಿ 37 ಲಕ್ಷಕ್ಕೂ ಹೆಚ್ಚು ಸಾರ್ವಜನಿಕರು ಜನಸಾಮಾನ್ಯರು ಸಹಿ ಹಾಕುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ಮೂಲಕ ಓಇಕ ರದ್ಧತಿಯನ್ನು ಆಗ್ರಹಿಸಿ ರಾಜ್ಯವ್ಯಾಪಿ ವಿದ್ಯಾರ್ಥಿಗಳ ಬೃಹತ್ ಹೋರಾಟಗಳು ಭುಗಿಲೆದ್ದಿತು. ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಎನ್.ಇ.ಪಿ. 2020ನ್ನು ಕರ್ನಾಟಕದಲ್ಲಿ ರದ್ದುಗೊಳಿಸಬೇಕಾಯಿತು. ಈ ಅಭೂತಪೂರ್ವ ವಿಜಯವು, ದೇಶಕ್ಕೆ ಮಾದರಿಯಾಗುವಂತಿದೆ.
ಈಗ ನಮ್ಮ ಮುಂದಿರುವ ದೊಡ್ಡ ಸವಾಲೆಂದರೆ ಎನ್.ಈ.ಪಿಯು ದೇಶದ ಯಾವ ಮೂಲೆಯಲ್ಲೂ ಜಾರಿಯಾಗದಂತೆ ತಡೆಯಲು ವಿದ್ಯಾರ್ಥಿಗಳ ಸಂಘಟಿತ ಹೋರಾಟ ಬೆಳೆಸುವುದಾಗಿದೆ. ಸಮಾಜದಲ್ಲಿ ಕುಸಿಯುತ್ತಿರುವ ಸಾಂಸ್ಕೃತಿಕ ಮಟ್ಟ ಹಾಗೂ ಮಹಿಳೆಯರ ಮೇಲೆ ದಿನೇದಿನೇ ಹೆಚ್ಚುತ್ತಿರುವ ಅಪರಾಧಗಳ ವಿರುದ್ಧ ಸಾಂಸ್ಕೃತಿಕ ಚಳುವಳಿಯನ್ನು ಹರಿ ಬಿಡಬೇಕಿದೆ. ಸಾರ್ವಜನಿಕ ಶಿಕ್ಷಣವನ್ನು ಉಳಿಸುವ, ಮಾನವತೆ ಮತ್ತು ಸಂಸ್ಕೃತಿಯನ್ನು ಉಳಿಸುವ ಘೋಷವಾಕ್ಯಗಳು ಮೊಳಗಿಸಿ, ಉತ್ತಮ ಸಮಾಜ ನಿರ್ಮಿಸುವ ಉದಾತ್ತ ಜವಬ್ದಾರಿ ನಮ್ಮ ಮೇಲಿದೆ.
ಈ ಐತಿಹಾಸಿಕ ಅವಶ್ಯಕತೆಗಾಗಿ ವಿದ್ಯಾರ್ಥಿ ಹೋರಾಟಗಳನ್ನು ಇನ್ನಷ್ಟು ಬಲಿಷ್ಟಗೊಳಿಸಲು ಂಋಖಓ 10ನೇ ಅಖಿಲ ಭಾರತ ಸಮ್ಮೇಳನವನ್ನು ದೇಶದ ರಾಜಧಾನಿ ದೆಹಲಿಯಲ್ಲಿ 27,28,29 ರಂದು ಹಮ್ಮಿಕೊಳ್ಳಲಾಗಿದೆ. ಶಿಕ್ಷಣ ಪ್ರೇಮಿ ಜನತೆ, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಈ ಸಮ್ಮೇಳನದ ಕರೆಗೆ ಓಗೊಟ್ಟು, ಅಖಿಲ ಭಾರತ ಸಮ್ಮೇಳನವನ್ನು ಯಶಸ್ವಿಗೊಳಿಸಲು ಎಐಡಿಎಸ್ಓ ಜಿಲ್ಲಾ ಸಮಿತಿಯು ಈ ಮೂಲಕ ಮನವಿ ಮಾಡುತ್ತದೆ.