3 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ
3 Crore Rs. Driving cost road works
3 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ
ಬೆಳಗಾವಿ 03 : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಳೇನಹಟ್ಟಿಯ ಮುಖ್ಯ ರಸ್ತೆಯ ಡಾಂಬರೀಕರಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಉಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಶುಕ್ರವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಸುಮಾರು 3 ಕೋಟಿ ರೂ,ಗಳ ವೆಚ್ಚದಲ್ಲಿ ರಸ್ತೆಯ ಡಾಂಬರೀಕರಣ ಕಾಮಗಾರಿ ಮಂಜೂರಾಗಿದ್ದು, ನಿಗದಿತ ಸಮಯದಲ್ಲಿ, ಸ್ಥಳೀಯರ ಸಲಹೆ ಪಡೆದು ಗುಣಮಟ್ಟದ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಸಚಿವರು ಸೂಚನೆ ನೀಡಿದ್ದಾರೆ.ಈ ವೇಳೆ ಸ್ಥಳೀಯ ಜನಪ್ರತಿನಿಧಿಗಳು, ಮಂಗೇಶ ನಾಯ್ಕ, ರಾಜು ನಾಯ್ಕ್, ಬಸು ಅಣ್ಣ, ಪಿಡಿಓ ಶೋಭಾ, ಅಡಿವೆಪ್ಪ ಗೌರನ್ನವರ, ಅನೇಕ ಮುಖಂಡರು ಉಪಸ್ಥಿತರಿದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 