63ನೇ ಕನ್ನಡ ರಾಜ್ಯೋತ್ಸವ: ಕನ್ನಡದಲ್ಲಿಯೇ ಶುಭಾಷಯ ಕೋರಿದ ಪ್ರಧಾನಿ, ರಾಷ್ಟ್ರಪತಿ
ನವದೆಹಲಿ 01: 63ನೇ ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕರ್ನಾಟಕ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿದ್ದಾರೆ.
ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಶುಭಾಶಯಗಳು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ಶ್ರೀಮಂತ ಇತಿಹಾಸ ಹೊಂದಿದ್ದು, ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಪ್ರತಿಭಾವಂತರಿಗೆ ನೆಲೆಯಾಗಿದೆ. ನಾನು ರಾಜ್ಯದ ಜನರ ಸಂತೋಷ ಹಾಗೂ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕರ್ನಾಟಕ ರಾಜ್ಯೋತ್ಸವದ ಈ ದಿನದಂದು, ಕರ್ನಾಟಕದ ಜನತೆಗೆ ಹಾರ್ಧಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ ಎಂದು ಶುಭ ಹಾರೈಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 