ಬಳ್ಳಾರಿ

ನೂತನ ಜಿಲ್ಲಾಡಳಿತ ಭವನದಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನ ಆಚರಣೆ

ನೂತನ ಜಿಲ್ಲಾಡಳಿತ ಭವನದಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನ ಆಚರಣೆ

ಬಳ್ಳಾರಿ: ನಗರದ ಡಾ.ರಾಜ್ಕುಮಾರ್ ರಸ್ತೆಯ ನೂತನ ಜಿಲ್ಲಾಡಳಿತ ಭವನದಲ್ಲಿ ಪ್ರಥಮ ಬಾರಿಗೆ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಲಾಯಿತು.

ಜಿಲ್ಲಾಧಿಕಾರಿ ಪ್ರಶಾಂತ್ಕುಮಾರ್ ಮಿಶ್ರಾ ಅವರು 77ನೇ ಸ್ವಾತಂತ್ರ್ಯೋತ್ಸವ ದಿನ ಅಂಗವಾಗಿ ಧ್ವಜಾರೋಹಣಾ ನೆರವೇರಿಸಿದರು. ಈ ಸಂದರ್ಭದಲ್ಲಿ ಎಲ್ಲರಿಗೂ ಸ್ವಾತಂತ್ಯ ದಿನಾಚರಣೆಯ ಶುಭಾಷಯ ತಿಳಿಸಿದರು.

 ಸಹಾಯಕ ಆಯುಕ್ತರಾದ ಹೇಮಂತ್ಕುಮಾರ್, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರಾ, ಜಿಲ್ಲಾ ಖನಿಜ ಪ್ರತಿಷ್ಠಾನ ವಿಶೇಷ ಅಧಿಕಾರಿ ಪಿ.ಎಸ್.ಮಂಜುನಾಥ, ತಹಶೀಲ್ದಾರ ಗುರುರಾಜ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಗೂ ಇತರರು ಇದ್ದರು.


ಸುದ್ದಿ ಓದಿ