ಎಸ್‌ಎಸ್ ವಿದ್ಯಾ ಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ
77th Republic Day Celebrations at SS Vidya Sanstha
ತಾಳಿಕೋಟಿ 27: ಪಟ್ಟಣದ ಎಸ್ ಎಸ್ ವಿದ್ಯಾಸಂಸ್ಥೆಯಲ್ಲಿ ಧ್ವಜಾರೋಹಣಕ್ಕೆ ಬಿಪಿಇಡಿ ಪ್ರಶಿಕ್ಷಣಾರ್ಥಿಗಳು ಪಥಸಂಚಲನದ ಮುಖಾಂತರ ಅಧ್ಯಕ್ಷರನ್ನು ಸ್ವಾಗತಿಸಿದರು. ಪಥಸಂಚಲನದ ನೇತೃತ್ವವನ್ನು ಪ್ರಾಚಾರ್ಯ ಶಿವಕುಮಾರ. ನಾಯಕ ಮತ್ತು ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಎಮ್.ಎಸ್.ರಾಯಗೊಂಡ ವಹಿಸಿದ್ದರು. ಧ್ವಜಾರೋಹಣವನ್ನು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಶ ಎಚ್.ಎಸ್.ಪಾಟೀಲರು ನೇರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳು ಆದರ್ಶ ವಿದ್ಯಾರ್ಥಿಗಳು ಆಗಬೇಕು ಹಾಗೂ ಶಿಕ್ಷಕರು ಆದರ್ಶ ಶಿಕ್ಷಕರಾಗಬೇಕು. ಮನೆ ಮನೆಯಲ್ಲಿ ಸೈನಿಕರು ದೇಶ ಸೇವೆಗಾಗಿ ಸಿದ್ಧರಾಗಬೇಕು ಎಂದು ಹೇಳಿದರು.
ಮುಖ್ಯೋಪಾಧ್ಯಾಯ ಅಶೋಕ.ಕಟ್ಟಿ,ವಿಜ್ಞಾನ ವಿಭಾಗದ ಮುಖ್ಯಸ್ಥ ಸಿದ್ಧಾರ್ಥ ರೆಡ್ಡಿ ಮತ್ತು ಸಂಗಮೇಶ್ವರ ಪ್ರೌಢಶಾಲೆಯ ಶಿಕ್ಷಕ ಎಸ್.ಸಿ.ಗುಡಗುಂಟಿ ಗಣರಾಜ್ಯೋತ್ಸವ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಪ್ರಾಚಾರ್ಯರಾದ ಡಾ: ಎಚ್.ಬಿ. ನಡುವಿನಕೇರಿ,ಶಿವಕುಮಾರ ನಾಯಕ,ವಿಜ್ಞಾನ ವಿಭಾಗದ ಮುಖ್ಯಸ್ಥ ಸಿದ್ಧಾರ್ಥ ರೆಡ್ಡಿ,ವಿರೇಶ ಕನಕ,ಅಶೋಕ ಕಟ್ಟಿ,ಜೆ.ಸಿ.ಪಾಟೀಲ,ಬಿ.ಆಯ್.ಹಿರೇಹೊಳಿ,ವಿದ್ಯಾಸಂಸ್ಥೆಯ ಸಮಸ್ತ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ಬಿ.ಆಯ್.ಹಿರೇಹೊಳಿ ನಿರೂಪಿಸಿ ವಂದಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 