'83’ ಜೂನ್ 4ಕ್ಕೆ ರಿಲೀಸ್
ಮುಂಬೈ, ಫೆ 20 : ಬಹು ನಿರೀಕ್ಷೆಯ ‘83’ ಚಿತ್ರದ ಬಿಡುಗಡೆಯ ದಿನಾಂಕ ಬಹಿರಂಗವಾಗಿದೆ.ಕಳೆದ ವರ್ಷವೇ ಚಿತ್ರ ತೆರೆ ಕಾಣಬೇಕಿದ್ದರೂ, ಕೊರೋನಾ ಕಾರಣದಿಂದ ಮುಂದೂಡಲಾಗಿತ್ತು. ಇದೀಗ ದಿನಾಂಕ ಫಿಕ್ಸ್ ಆಗಿದ್ದು, ಜೂನ್ 4ಕ್ಕೆ ತೆರೆಗೆ ಬರುತ್ತಿದೆ.ಕ್ರಿಕೆಟ್ ಲೆಜೆಂಡ್ ಕಪಿಲ್ ದೇವ್ ನಾಯಕತ್ವದಲ್ಲಿ 1983ರಲ್ಲಿ ಭಾರತ ವಿಶ್ವ ಕಪ್ ಗೆದ್ದ ಸಂಭ್ರಮವನ್ನು ಬೆಳ್ಳಿತೆರೆ ಮೇಲೆ ನೋಡಲು ಕೋಟ್ಯಂತರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಕಪಿಲ್ ದೇವ್ ಪಾತ್ರದಲ್ಲಿ ನಟ ರಣ್ವೀರ್ ಸಿಂಗ್ ಕಾಣಿಸಿಕೊಂಡಿದ್ದು, ಈಗಾಗಲೇ ಫಸ್ಟ್ ಲುಕ್ ಮೂಲಕ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ‘83’ ಸಿನಿಮಾ ಹಿಂದಿ ಮಾತ್ರವಲ್ಲದೆ ದಕ್ಷಿಣ ಭಾರತದ ಎಲ್ಲಾ ಭಾಷೆಯಲ್ಲೂ ತೆರೆಗೆ ಬರುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿರುವ ರಣ್ವೀರ್ ಸಿಂಗ್ '83 ಸಿನಿಮಾ ಜೂನ್ 4ಕ್ಕೆ ರಿಲೀಸ್ ಆಗುತ್ತಿದೆ. ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲೂ ಬಿಡುಗಡೆಯಾಗುತ್ತಿದೆ' ಎಂದು ಹೇಳಿದ್ದಾರೆ. ಚಿತ್ರಕ್ಕೆ ಕಬೀರ್ ಖಾನ್ ಆಕ್ಷನ್ ಕಟ್ ಹೇಳಿದ್ದಾರೆ. ಕಪಿಲ್ ದೇವ್ ಪತ್ನಿಯ ಪಾತ್ರದಲ್ಲಿ ದೀಪಿಕಾ ಪಡುಕೋಣೆ ಮಿಂಚಿದ್ದಾರೆ.