ವೆಲ್ವೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ನಿಯೋಗದಿಂದ ಮುಖ್ಯಮಂತ್ರಿಗಳಿಗೆ ಮನವಿಜನ ವಿರೋಧಿ ಕಾಯ್ದೆಗಳನ್ನು ರದ್ದು ಮಾಡಿ

ವೆಲ್ವೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ನಿಯೋಗದಿಂದ ಮುಖ್ಯಮಂತ್ರಿಗಳಿಗೆ ಮನವಿಜನ ವಿರೋಧಿ ಕಾಯ್ದೆಗಳನ್ನು ರದ್ದು ಮಾಡಿ
A delegation from the Welfare Party of India party appealed to the Chief Minister to repeal anti-pe


           ಬೆಂಗಳೂರು 27: ಜನ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ಮಸ್ಲಿಂ ಮೀಸಲಾತಿ ಮರು ಸ್ಥಾಪಿಸಬೇಕು’ ಎಂದು ಆಗ್ರಹಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಪಕ್ಷದ ರಾಜ್ಯ ಸಮಿತಿ ನಿಯೋಗದಿಂದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ನಸೀರ್ ಅಹ್ಮದ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಕರ್ನಾಟಕ ಜಾನುವಾರು ಸಂರಕ್ಷಣಾ ಕಾಯ್ದೆ, ಕರ್ನಾಟಕ ಧರ್ಮ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆಗಳು ಸಂವಿಧಾನ ವಿರೋಧಿ ಕಾಯ್ದೆಗಳಾಗಿವೆ. ಜಾನುವಾರು ಸಂರಕ್ಷಣಾ ಕಾಯ್ದೆಯಿಂದ ಭಯದ ವಾತಾವರಣ ಸೃಷ್ಟಿಯಾಗಿದೆ. ಗೋ ಸಾಗಣೆ ಮಾಡುವವರ ಮೇಲೆ ಹಲ್ಲೆ ಮತ್ತು ್ಕ್ಪೂಹಿಹ್ಲೃ್ತ್ಖಿದೀ ಕಳವಳಕಾರಿ ಘಟನೆಗಳು ನಡೆದಿವೆ. ರೈತರು ತಾವು ಸಾಕಿದ ಜಾನುವಾರುಗಳನ್ನು ಮಾರಾಟ ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆ’ ಎಂದು ವೆಲ್ಫೇರ್ ಪಾರ್ಟಿಯ ಪಕ್ಷದ ನಿಯೋಗವು ಹೇಳಿದೆ.ಕರ್ನಾಟಕ ಧರ್ಮ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆ (ಮತಾಂತರ ನಿಷೇಧ ಕಾಯ್ದೆ) ನೆಪದಲ್ಲಿ ಕೋಮುವಾದಿಗಳು ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ದೌರ್ಜನ್ಯ ಎಸಗುತ್ತಿದ್ದಾರೆ.

         ಸಂವಿಧಾನವು ಎಲ್ಲರಿಗೂ ತಮಗೆ ಬೇಕಾದ ಧರ್ಮ ಅಪ್ಪಿಕೊಳ್ಳುವ ಹಕ್ಕನ್ನು ನೀಡಿದೆ. ಈ ಕಾಯ್ದೆ ಸಂವಿಧಾನ ವಿರೋಧಿಯಾಗಿದೆ ಎಂದು ದೂರಿದರು.ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲಿ ಈ ಕಾಯ್ದೆಗಳನ್ನು ರದ್ದು ಮಾಡುವ ಭರವಸೆ ನೀಡಿತ್ತು. ಆದರೆ, ಇನ್ನೂ ಈಡೇರಿಸಿಲ್ಲ. ಬೆಳಗಾವಿ ಅಧಿವೇಶನದಲ್ಲಿ ಈ ಕಾಯ್ದೆಗಳನ್ನು ರದ್ದು ಮಾಡುವ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.ಬಿಜೆಪಿ ಸರ್ಕಾರ ಇದ್ದಾಗ ಮುಸ್ಲಿಂ ಸಮುದಾಯಕ್ಕಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದು ಪಡಿಸಿದೆ. ಸಾಮಾಜಿಕ ನ್ಯಾಯ, ಶಿಕ್ಷಣ ಹಾಗೂ ಉದ್ಯೋಗದ ಅವಕಾಶಗಳನ್ನು ಖಾತ್ರಿ ಪಡಿಸಲು ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಅಗತ್ಯ. ಆದ್ದರಿಂದ ಮೀಸಲಾತಿ ಮರು ಸ್ಥಾಪಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ :ರಾಜ್ಯ ಅಧ್ಯಕ್ಷರು ಆಡೋ ತಾಹೇರ್ ಹುಸೇನ್, ರಾಜ್ಯ ಪ್ರಧಾನ ಕಾರ್ಯದರ್ಶಿ ರಿಯಾಜ್ ಅಹ್ಮದ್, ರಾಜ್ಯ ಉಪ ಅಧ್ಯಕ್ಷ ಇಂಜಿನಿಯರ್ ಹಬೀಬುಲ್ಲಾಹ್ ಖಾನ್ ಮತ್ತು ವಲಯ ಕಾರ್ಯದರ್ಶಿ ಸಯ್ಯೇದ್ ಇರ್ಫಾನ್ ಇದ್ದರು. 


ಸುದ್ದಿ ಓದಿ