ಅಳ್ವೇಕೋಡಿ ,ತಟ್ಟೆಹಕ್ಲು ನದಿಯಲ್ಲಿ ಭಾರಿ ದುರಂತ; ಚಿಪ್ಪು ಹೆಕ್ಕಲು ಹೋಗಿದ್ದ 9 ಜಲಸಮಾಧಿ ಮೃತರಲ್ಲಿ 8 ಜನ ಒಂದೇ ಕುಟುಂಬದವರು ಒಬ್ಬ ಮಾತ್ರ ಪುರುಷ 9 ಜನ ಮಹಿಳೆಯರ ಶವ ಪತ್ತೆ. *ಇನ್ನಿಬ್ಬರಿಗಾಗಿ ಹುಡುಕಾಟ
A major tragedy in the Thattehaklu river in Alvekodi; 8 of the 9 bodies found in the water that wen
ಕಾರವಾರ, 24 : ಭಟ್ಕಳ ತಾಲೂಕಿನ ಅಳ್ವೇಕೋಡಿ ತಟ್ಟೆ ಹಕ್ಕಲು ನದಿ ತೀರದಲ್ಲಿ 9 ಜನ ಜಲಸಮಾಧಿಯಾದ ದುರಂತ ಘಟನೆ ನಡೆದಿದೆ. ತಟ್ಟೆ ಹಕ್ಕಲು ಉಪ ನದಿಯ ತೀರದಲ್ಲಿ ತೀಸರೆ ಚಿಪ್ಪೆ ( ಬೆಳಚು) ಹೆಕ್ಕಲು ತೆರಳಿದ್ದ ಒಂದೇ ಕುಟುಂಬದ ಎಂಟು ಮಂದಿ ಹಾಗೂ ಮತ್ತೊಬ್ಬ ಮಹಿಳೆ ನದಿಯ ಅಬ್ಬರದ ಸೆಳವಿಗೆ ಸಿಕ್ಕಿ ಕೊಚ್ಚಿಹೋಗಿ ಜಲಸಮಾಧಿಯಾಗಿದ್ದಾರೆ. ಓರ್ವ ಪುರುಷ, ಎಂಟು ಜನ ಮಹಿಳೆಯರು ಸಾವನ್ನಪ್ಪಿದ್ದಾರೆ. ಒಬ್ಬ ಪುರುಷ, ಒಬ್ಬ ಮಹಿಳೆಯ ಶವಕ್ಕಾಗಿ ಹುಡುಕಾಟ ನಡೆದಿದೆ. ಒಂಬತ್ತು ಜನರ ಶವ ಪತ್ತೆಯಾಗಿದೆ. ಎಂಟು ಜನರ ಮೃತದೇಹಗಳು ಮಹಿಳೆಯರದ್ದು. ನಾಡದೋಣಿ ಬಳಸಿ ಮೀನುಗಾರರು, ಆಗ್ನಿಶಾಮಕ ದಳದವರು , ಪೊಲೀಸರು ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಸಲಾಗುತ್ತಿದೆ.
ಒಬ್ಬ ಮಹಿಳೆ ಮೊದಲು ನೀರಿನ ಸೆಳೆವಿಗೆ ಸಿಕ್ಕಳು, ಆಕೆಯನ್ನು ರಕ್ಷಿಸಲು ಪುರುಷ ಮುಂದಾಗಿದ್ದು, ಆತ ನೀರಿನ ಸೆಳೆತಕ್ಕೆ ಸಿಕ್ಕಿದ್ದಾರೆ. ಅವರನ್ನು ರಕ್ಷಿಸಲು ಇತರೆ ಮಹಿಳೆಯರು ಮುಂದಾಗಿದ್ದು, ಒಬ್ಬರನ್ನು ರಕ್ಷಿಸಲು ಮುಂದಾಗಿ ಹದಿನಾಲ್ಕು ಜನರ ಪೈಕಿ ಹತ್ತು ಜನ ನೀರಲ್ಲಿ ಮುಳುಗಿದರು. 9 ಜನ ಸಾವನ್ನಪ್ಪಿದ್ದು, ಇಬ್ಬರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಇನ್ನೂ ಇಬ್ಬರು ನಾಪತ್ತೆಯಾಗಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಬರುತ್ತಿದೆ. ಒಟ್ಟು 14 ಜನರಿದ್ದ ತಂಡವೊಂದು ಅಳಿವೆಕೋಡಿ ನದಿ ಸಮುದ್ರ ಸಂಗಮದ ತೀರಕ್ಕೆ ತೆರಳಿತ್ತು. ಈ ವೇಳೆ ನದಿಯಲ್ಲಿ ಚಿಪ್ಪೆಕಲ್ಲು ತೆಗೆಯಲು ನೀರಿನಲ್ಲಿ ಇಳಿದಾಗ, ಏಕಾಏಕಿ ಬಂದ ಭಾರೀ ಪ್ರವಾಹದ ಸೆಳೆತಕ್ಕೆ ಸಿಲುಕಿ ನೋಡನೋಡುತ್ತಿದ್ದಂತೆಯೇ ನೀರು ಪಾಲಾಗಿದ್ದಾರೆ. ಈ ಅವಘಡದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಎಲ್ಲರೂ ಒಂದೇ ಕುಟುಂಬದವರು ಎಂಬುದು ದೃಢಪಟ್ಟಿದೆ.
ಲಕ್ಷ್ಮಿ ಮಾದೇವ ನಾಯ್ಕ(42), ಲಕ್ಷ್ಮಿ ಶಿವರಾಂ ನಾಯ್ಕ( 39), ಲಕ್ಷ್ಮಿ ಅಣ್ಣಪ್ಪ ನಾಯ್ಕ(44), ಜ್ಯೂತಿ ನಾಗಪ್ಪ ನಾಯ್ಕ( 34) , ಮಾಲತಿ ನಾಯ್ಕ (38), ಉಮೇಶ್ ಎಂ.ನಾಯ್ಕ (42), ಮಾಸ್ತಮ್ಮ ಎಂ.ನಾಯ್ಕ(42) ,ಮಂಜಮ್ಮ ಗೋಯ್ದ ನಾಯ್ಕ (40) ಮೃತಪಟ್ಟವರು ಎಂದು ತಿಳಿದು ಬಂದಿದೆ. ಅಸ್ತಸ್ಥರಾಗಿರುವ ನಾಗರತ್ನ, ಮಾಹಾದೇವಿ ಎಂಬುವವರನ್ನು ಹೆಚ್ಚಿನ ಚಿಕಿತ್ಸೆ ಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ನದಿಯ ಅಲೆಗಳ ಅಬ್ಬರಕ್ಕೆ ಕೊಚ್ಚಿಹೋದ ಮೂವರಿಗಾಗಿ ಸಮುದ್ರದಲ್ಲಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಮೃತಪಟ್ಟವರೆಲ್ಲರೂ ಭಟ್ಕಳ ತಾಲೂಕಿನ ಶಾರದಹೊಳೆಯ ಹೆರಿಹಿತ್ಲು ಮಜಿರೆ ಮೂಲದ ನಿವಾಸಿಗಳು ಎಂದು ತಿಳಿದುಬಂದಿದೆ. ಸಂಬಂಧಿಕರ ಆಕ್ರಂದನ : ನದಿ ಸಮುದ್ರದಲ್ಲಿ ಕೊಚ್ಚಿಹೋದವರ ಪೈಕಿ ಆರು ಮೃತದೇಹಗಳನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಉಳಿದ ಎರಡು ಮೃತದೇಹಗಳನ್ನು ಆರ್.ಎನ್.ಎಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಒಂದೇ ಕುಟುಂಬದ ಎಂಟು ಮಂದಿ ಅಸುನೀಗಿದ ಸುದ್ದಿ ತಿಳಿದು ಆಸ್ಪತ್ರೆಯ ಬಳಿ ಜಮಾಯಿಸಿರುವ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಘಟನೆ ಕುರಿತಂತೆ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆ ಹಾಗೂ ಹೆಚ್ಚಿನ ತನಿಖೆ ಮುಂದುವರಿದಿದೆ. ಸ್ಥಳದಲ್ಲಿ ಜಿಲ್ಲಾ ಉಸ್ತುವಾರಿ ಮಂಕಾಳು ವೈದ್ಯ ಸ್ಥಳದಲ್ಲಿದ್ದು ಕಾರ್ಯಾಚರಣೆಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಎಸ್ಪಿ ,ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡುತ್ತಿದ್ದಾರೆ. *ಸಿಎಂ ಸಿದ್ದರಾಮಯ್ಯ ರಿಂದ ಸಂತಾಪ:*ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವೀಗೀಡಾಗಿದ ಸುದ್ದಿ ತಿಳಿದು ಸಂಕಟವಾಯಿತು.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನೂ ಕೆಲವರು ಈ ದುರ್ಘಟನೆಯಲ್ಲಿ ಕಾಣೆಯಾಗಿರುವ ಮಾಹಿತಿಯಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಕಾಣೆಯಾದವರು ಬದುಕಿಬಂದು ತಮ್ಮವರನ್ನು ಕೂಡಿಕೊಳ್ಳಲಿ ಎಂದು ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸೋಣ ಎಂದಿದ್ದಾರೆ. ...
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ 