ಯಶಸ್ವಿಯಾದ ಉದ್ಯೋಗ ಮೇಳ
A successful job fair
ಯಶಸ್ವಿಯಾದ ಉದ್ಯೋಗ ಮೇಳ
ಕಾರವಾರ 09 : ಕೌಶಲ್ಯಾಭಿವೃಧ್ದಿ, ಉದ್ಯಮಶೀಲತೆ ಮತ್ತು ಜಿವನೋಪಾಯ ಇಲಾಖೆ ವತಿಯಿಂದ ಗುರುವಾರ ಕಾರವಾರದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ 400 ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದು, 24 ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಸಂದರ್ಶನ ನೀಡಿದರು.ಉದ್ಯೋಗಮೇಳದಲ್ಲಿ ಭಾಗವಹಿಸಿದ್ದ 24 ಕಂಪನಿಗಳು ಒಟ್ಟು 1630 ಉದ್ಯೋಗಗಳ ಬೇಡಿಕೆ ನೀಡಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೋಮೋ, ಪದವಿ ಮತ್ತು ಸ್ನಾತಕೋತ್ತರ ಪಧವೀಧರ ಅಭ್ಯರ್ಥಿಗಳು ವಿವಿಧ ಹುದ್ದೆಗಳಿಗೆ ಸಲ್ಲಿರುವ ದಾಖಲೆಗಳನ್ನು ಕಂಪನಿಗಳು ಪರೀಶೀಲನೆ ಮಾಡಿದ ನಂತರ ಅವರಿಗೆ ಸೂಕ್ತ ಉದ್ಯೋಗದ ಕುರಿತಂತೆ ನೆಮಕಾತಿ ಪತ್ರ ದೊರೆಯಲಿದೆ.ಕಾರ್ಯಕ್ರಮದಲ್ಲಿ ಯುವನಿಧಿ ಯೋಜನೆಯ ನೋಂದಣಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದ್ದು, ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದ ಅಭ್ಯರ್ಥಿಗಳಿಗೆ ಕೌಶಲ್ಯಾಭಿವೃದ್ಧಿಯ ಕುರಿತು ತರಬೇತಿ ವ್ಯವಸ್ಥೆಯನ್ನು ಮಾಡಲಾಗಿತ್ತು.ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಡಿ.ಟಿ ನಾಯ್ಕ್ ಅವರ ನೇತೃತ್ವದಲ್ಲಿ ಉದ್ಯೋಗ ಮೇಳಕ್ಕೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿತ್ತು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 