ಸಡಗರದಿಂದ ಮಹಾಯೋಗಿ ವೇಮನ ಜಯಂತಿ ಆಚರಿಸಲು ನಿಧರ್ಾರ

ಸಡಗರದಿಂದ ಮಹಾಯೋಗಿ ವೇಮನ ಜಯಂತಿ ಆಚರಿಸಲು ನಿಧರ್ಾರ

ಬಳ್ಳಾರಿ 08:ಮಹಾಯೋಗಿ ವೇಮನ ಅವರ ಜಯಂತಿ ಆಚರಣೆಯನ್ನು ಇದೇ ಜನವರಿ 19 ರಂದು  ಜಿಲ್ಲೆಯಲ್ಲಿ ಸಂಭ್ರಮ-ಸಡಗರದಿಂದ  ಆಚರಿಸಲು  ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸವರ್ಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು,

    ಜಯಂತ್ಯುತ್ಸವದ ಅಂಗವಾಗಿ ಮಹಾಯೋಗಿ ವೇಮನ ಅವರ ಭಾವಚಿತ್ರದ ಭವ್ಯ ಮೆರವಣಿಗೆ ಅಂದು ಬೆಳಿಗ್ಗೆ 9.30 ಗಂಟೆಗೆ ಮುನ್ಸಿಪಾಲ್ ಕಾಲೇಜು ಮೈದಾನದಿಂದ ಪ್ರಾರಂಭಗೊಂಡು ಗಡಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹಳೇ ಬ್ರೂಸ್ ಪೇಟೆ ಪೊಲೀಸ್ ಠಾಣೆ, ಜೈನ್ ಮಾಕರ್ೆಟ್, ಹೆಚ್. ಆರ್.ಜಿ ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದರಾಶಿ ದೊಡ್ಡನ ಗೌಡ ರಂಗಮಂದಿರದವರಿಗೆ ವಿಜೃಂಭಣೆಯಿಂದ ಹಾಗೂ ವಿವಿಧ ಕಲಾ ತಂಡಗಳೊಂದಿಗೆ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. 

    ನಂತರ ಬೆಳಿಗ್ಗೆ 11.30 ಗಂಟೆಗೆ ಮಹಾಯೋಗಿ ವೇಮನ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಲು ನಿರ್ಧರಿಸಲಾಯಿತು.  ವಿವಿಧ ಸಮಾಜ ಬಾಂಧವರು ಕಾರ್ಯಕ್ರದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಸತೀಶ್ ಕುಮಾರ್ ಅವರು ಮನವಿ ಮಾಡಿದರು.

ಶಿಷ್ಠಚಾರದಂತೆ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಮಹಾಯೋಗಿ ವೇಮನ ಅವರ ಜೀವನ ಚರಿತ್ರೆ ಕುರಿತು ಉಪನ್ಯಾಸಕರಿಂದ ಉಪನ್ಯಾಸ ಹಾಗೂ ಕಾರ್ಯಕ್ರಮದಲ್ಲಿ ವೇಮನ ಅವರ ವಚನಗಳನ್ನು ಗೀತ ಗಾಯನದಲ್ಲಿ ಪ್ರಸ್ತುತಪಡಿಸಲು ಕ್ರಮ ವಹಿಸಬೇಕು. ಮೆರವಣಿಗೆಯಲ್ಲಿ ಆಕರ್ಷಕ ಕಲಾ ತಂಡಗಳ ನಿಯೋಜನೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು. 

  ಸಭೆಯಲ್ಲಿ ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕ ಬಿ.ನಾಗರಾಜ್, ವಿವಿಧ ಸಂಘ ಸಮಾಜದ ಪದಾಧಿಕಾರಿಗಳು, ಸಮಾಜದ ಮುಖಂಡರು ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.  


ಸುದ್ದಿ ಓದಿ