ವನಿತೆಯರ ಭಾವಚಿತ್ರಗಳಿಗೆ ಪುಷ್ಪನಮನ

ವನಿತೆಯರ ಭಾವಚಿತ್ರಗಳಿಗೆ ಪುಷ್ಪನಮನ


ವನಿತೆಯರ ಭಾವಚಿತ್ರಗಳಿಗೆ ಪುಷ್ಪನಮನ 

ಹಾನಗಲ್ 20 : ಶಾಸಕ ಶ್ರೀನಿವಾಸ ಮಾನೆ ಅವರ ಜನಸಂಪರ್ಕ ಕಚೇರಿಯಲ್ಲಿ  ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಹಾಗೂ ಸ್ವಾತಂತ್ರ್ಯ ಹೋರಾಟಗಾರ್ತಿ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರ ಜಯಂತಿ ಆಚರಿಸಲಾಯಿತು. 

        ಈ ಸಂದರ್ಭದಲ್ಲಿ ಉಭಯ ವನಿತೆಯರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮರಗಡಿ ಮಾತನಾಡಿ, ಇಬ್ಬರೂ ವೀರವನಿತೆಯರು ದೇಶಕ್ಕೆ ಅಪ್ರತಿಮ ಕೊಡುಗೆ ನೀಡಿದ್ದಾರೆ. ಇಂದಿರಾ ಗಾಂಧಿ ಅವರು ಪ್ರಧಾನ ಮಂತ್ರಿಯಾಗಿ ಬಡವರು ಹಾಗೂ ಶೋಷಿತರ ಧ್ವನಿಯಾಗಿದ್ದರು. ಬಡತನದ ನಿರ್ಮೂಲನೆಗೆ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತಂದಿರುವ ಶ್ರೇಯಸ್ಸು ಅವರಿಗೆ ಸಲ್ಲಬೇಕಿದೆ. ಬ್ರಿಟಿಷರ ನಿದ್ದೆಗೆಡಿಸಿ, ಸ್ವಾತಂತ್ರ್ಯಕ್ಕೆ ಹೋರಾಡಿದ ಝಾನ್ಸಿ ರಾಣಿ ಲಕ್ಷ್ಮೀಬಾಯಿ ನಮಗೆಲ್ಲರಿಗೂ ಆದರ್ಶರಾಗಿದ್ದಾರೆ ಎಂದರು. 

   ಪುರಸಭೆ ಅಧ್ಯಕ್ಷೆ ಮಮತಾ ಆರೆಗೊಪ್ಪ, ಮುಖಂಡರಾದ ಚಂದ್ರು ಸುಣ್ಣದಕಲ್, ದುದ್ದು ಅಕ್ಕಿವಳ್ಳಿ, ನಿಯಾಜ್ ಸರ್ವಿಕೇರಿ, ಗೌಸ್ ತಾಂಡೂರ, ಬಸವರಾಜ ಹುರುಳಿಕುಪ್ಪಿ, ವಿನಾಯಕ ಬಂಕನಾಳ, ಸಿಕಂದರ್ ವಾಲಿಕಾರ, ಗುಡ್ಡಪ್ಪ ಉಪ್ಪಣಸಿ, ಶಾರಿಕ್ ಕಿಲ್ಲೇದಾರ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು. 


ಸುದ್ದಿ ಓದಿ