ನಟ ಕಮಲ್ ಹಾಸನ್ ಕಾಲಿಗೆ ಶಸ್ತ್ರಚಿಕಿತ್ಸೆ, ಆರೋಗ್ಯ ಸ್ಥಿರ
ಚನ್ನೈ, ಜ 19 : ನಟ ಹಾಗೂ ಮಕ್ಕಳ್ ನೀದಿ ಮೈಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ.ಈ ಕುರಿತು ಕಮಲ್ ಹಾಸನ್ ಪುತ್ರಿಯರಾದ ಅಕ್ಷರ ಹಾಗೂ ಶೃತಿ ಹಾಸನ್ ತಂದ ಆರೋಗ್ಯದ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಅವರ ಚೇತರಿಕೆಗೆ ಪ್ರಾರ್ಥಿಸಿದ ಅಭಿಮಾನಿಗಳಿಗೆ ಧನ್ಯವಾದಗಳು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ. ರಾಮಚಂದ್ರ ಆಸ್ಪತ್ರೆಯಲ್ಲಿ ಆರ್ಥೋಪೆಡಿಕ್ ಸರ್ಜನ್ ಡಾ.ಮೋಹನ್ ಕುಮಾರ್ ಹಾಗೂ ಡಾ. ಜೆ.ಎಸ್.ಎನ್ ಮೂರ್ತಿ ಅವರು ನಮ್ಮ ತಂದೆಯ ಕಾಲಿಗೆ ಸರ್ಜರಿ ಮಾಡಲಾಗಿದ್ದು, ಶಸ್ತ್ರಚಿಕಿತ್ಸೆಯಿಂದ ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕ ಮೊದಲಿನಂತೆ ಜನರನ್ನು ಭೇಟಿ ಮಾಡಲಿದ್ದಾರೆ. ಅವರ ಆರೋಗ್ಯದ ಚೇತರಿಕೆಗೆ ಪ್ರಾರ್ಥಿಸಿ, ಪ್ರೀತಿ ತೋರಿಸಿದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು.