ವಿಜಯಪುರ

ಕ್ರೀಡಾಕೂಟದಲ್ಲಿ ಸಂಗಮೇಶ್ವರ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕ್ರೀಡಾಕೂಟದಲ್ಲಿ ಸಂಗಮೇಶ್ವರ ಕಾಲೇಜು ವಿದ್ಯಾರ್ಥಿಗಳ ಸಾಧನೆ


ಕೊಲ್ಹಾರ 21: ಬಸವನ ಬಾಗೇವಾಡಿಯ ಬಸವೇಶ್ವರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಸಿಆರಿ​‍್ಡ ತಾಲೂಕು ಮಟ್ಟದ ವೈಯಕ್ತಿಕ ಕ್ರೀಡಾಕೂಟದಲ್ಲಿ ಕೊಲ್ಹಾರದ ಸಂಗಮೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.  

100 ಮೀಟರ್ ಓಟದಲ್ಲಿ ಕಾರ್ತಿಕ ನುಚ್ಚಣ್ಣವರ ದ್ವಿತೀಯ ಸ್ಥಾನ, 800 ಮೀಟರ್ ಓಟದಲ್ಲಿ ಕಿರಣ ಬೆಳ್ಳುಬ್ಬಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಬಾಲಕಿಯರ ಸರಪಳಿ ಗುಂಡು ಎಸೆತದಲ್ಲಿ ಸವಿತಾ ಗೋಳಗೊಂಡ ಪ್ರಥಮ ಹಾಗೂ ಅಕ್ಷತಾ ಕುರ್ಜೋಗಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.  

ಬಾಲಕರ ಗುಡ್ಡಗಾಡು ಓಟದಲ್ಲಿ ಶ್ರವಣ ಬಾಡಗಂಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ನಡಿಗೆ ಸ್ಪರ್ಧೆಯಲ್ಲಿ ಅಕ್ಷತಾ ಲಮಾಣಿ ದ್ವಿತೀಯ ಸ್ಥಾನ ಹಾಗೂ ಟ್ರಿಪಲ್ ಜಂಪ್ನಲ್ಲಿ ಕಿರಣ ಬೆಳ್ಳುಬ್ಬಿ ಪ್ರಥಮ ಸ್ಥಾನ ಪಡೆದಿದ್ದಾರೆ.  

ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ: ಅಖಿಲ್ ಉಪ್ಪಲದಿನ್ನಿ 200 ಮೀಟರ್ ಓಟದಲ್ಲಿ ಪ್ರಥಮ, ಬಾಲಕರ ಗುಂಡು ಎಸೆತದಲ್ಲಿ ದ್ವಿತೀಯ ಹಾಗೂ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.  

ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಶ್ರೀ ಸಂಗಮೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು, ನಿರ್ದೇಶಕರು, ಪ್ರಾಚಾರ್ಯರು, ದೈಹಿಕ ಶಿಕ್ಷಣ ಉಪನ್ಯಾಸಕರು ಹಾಗೂ ಉಪನ್ಯಾಸಕ ಬಳಗ ಅಭಿನಂದಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ. 


ಸುದ್ದಿ ಓದಿ