ಬಾಲ್ಯ ವಿವಾಹ ತಡೆಗಟ್ಟಿ ಲೋಪವೆಸಗಿದಲ್ಲಿ ವಜಾಗೊಳಿಸಲು ಕ್ರಮ : ಜಿಲ್ಲಾಧಿಕಾರಿ
ವಿಜಯಪುರ 21 : ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಬಾಲ್ಯ ವಿವಾಹ ಪ್ರಕರಣಗಳನ್ನು ಮುಚ್ಚಿಹಾಕಿ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಲ್ಲಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಿಬ್ಬಂದಿ ವರ್ಗದವರನ್ನು ವಜಾಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ 2022-23ನೇ ಸಾಲಿಗೆ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005 ನಿಯಮ 06 ರ ಅಡಿ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಹಾಗೂ ಪರಿಶೀಲನಾ ಸಭೆ ಮತ್ತು ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ ಯೋಜನೆಯಡಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾಲ ವಿವಾಹವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅತಿ ಮುಖ್ಯ ವಹಿಸುತ್ತದೆ. ಅತೀ ಹೆಚ್ಚು ಬಾಲ್ಯ ವಿವಾಹ ಪದ್ಧತಿ ಹಳ್ಳಿಗಳಲ್ಲಿ ಜಾರಿಯಲ್ಲಿದ್ದು, ಪ್ರತಿನಿತ್ಯ ಒಂದಲ್ಲ ಒಂದು ಹಳ್ಳಿಯಲ್ಲಿ ಬಾಲ್ಯ ವಿವಾಹ ನಡೆಯುತ್ತವೆ. ಇಂತ ಅನಿಷ್ಟ ಪದ್ಧತಿಗಳಿಗೆ ಇಲಾಖೆ ಬರೆ ಎಳೆದು, ಕಾನೂನಿನ ಕ್ರಮ ಜರುಗಿಸುವ ಕಾರ್ಯ ಮಾಡಬೇಕು. ಪ್ರತಿ ಗ್ರಾಮಗಳಲ್ಲಿ ಗ್ರಾಮ ಸಭೆ, ಬೀದಿ ನಾಟಕಗಳ ಮೂಲಕ ಬಾಲ್ಯ ವಿವಾಹದ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಬೇಕು. ಇಲಾಖೆ ಅಡಿಯಲ್ಲಿ ಬರುವ ಅಂಗನವಾಡಿ ಕಾರ್ಯಕರ್ತರಿಗೆ ಬಾಲ್ಯ ವಿವಾಹಗಳಂತಹ ಪ್ರಕರಣ ವರದಿ ದಾಖಲಾದರೆ ಕೂಡಲೇ ಇಲಾಖೆಗೆ ಸೂಚಿಸುವಂತೆ ಆದೇಶ ಹೊರಡಿಸಬೇಕು ಅವರು ಹೇಳಿದರು.
ಇತ್ತೀಚಿನ ವರ್ಷದಲ್ಲಿ ಅಂಗನವಾಡಿ ಹಾಜರಾತಿ ಸಂಖ್ಯೆ ಕಡಿಮೆಯಾಗಿದೆ. ಎನ್.ಆರ್.ಸಿ ವ್ಯವಸ್ಥೆ ಸಮರ್ಪಕವಾಗಿ ನಿರ್ವಹಿಸಬೇಕು. ಗರ್ಭಿಣಿಯರಿಗೆ ಹೆರಿಗೆ ಸಂದರ್ಭದಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಬೆಡ್ಗಳ ವ್ಯವಸ್ಥೆ ಜೊತೆಗೆ ಮೂಲ ಸೌಕರ್ಯ ಒದಗಿಸಬೇಕು. ಬಾಲಕಿಯರ ವಸತಿ ನಿಲಯಗಳಲ್ಲಿ ಯಾವುದೇ ರೀತಿಯ ಕುಂದು-ಕೊರತೆ ಉಂಟಾಗದಂತೆ ನೋಡಿಕೊಂಡು ಮಕ್ಕಳಿಗೆ ಬೇಕಾಗುವ ಊಟ, ವಸತಿ ಸೌಲಭ್ಯ ಒದಗಿಸಬೇಕು. ಜಿಲ್ಲೆಯ ಪ್ರತಿಯೊಂದು ವಸತಿ ನಿಲಯಗಳಿಗೆ ನಿಯಮಿತವಾಗಿ ಭೇಟಿ ನೀಡಿ ಅಧಿಕಾರಿಗಳು, ಮಕ್ಕಳ ಸಾಧಕ-ಭಾದಕಗಳನ್ನು ಆಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲಾಖೆ ಹಮ್ಮಿಕೊಂಡ ಹಲವಾರು ಕಾರ್ಯಕ್ರಮಗಳಾದ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಭೇಟಿ ಬಚಾವೋ-ಭೇಟಿ-ಪಡಾವೋ ಹಾಗೂ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಹಿನ್ನಲೆಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮಗಳು, ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ ಯೋಜನೆಯಡಿ ಕೈಗೊಂಡ ವಿವಿಧ ವರದಿ, ದಾಖಲೆ, ಅಂಕಿ-ಸಂಖ್ಯೆ, ಹಾಗೂ ಅಭಿವೃದ್ಧಿ ಯೋಜನೆ ಸಂಪೂರ್ಣ ಮಾಹಿತಿ ಈ ಸಭೆಯಲ್ಲಿ ಹಾಜರುಪಡಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ನ್ಯಾಯವಾದಿ ವೆಂಕಣ್ಣ ಹೊಸಮನಿ ಅವರು ಮಾತನಾಡಿ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಅಡಿಯಲ್ಲಿ ದಾಖಲಾಗುವ ಪ್ರಕರಣ ಬಗ್ಗೆ ಚಚರ್ೆ ನಡೆಸಬೇಕು. ಬಾಲ್ಯ ವಿವಾಹಕ್ಕೆ ಸಾಕ್ಷಿಯಾದ ವಧು- ವರರ ಸಂಬಂಧಿಕರು, ಸೇರಿದಂತೆ ಎಲ್ಲರನ್ನೂ ಶಿಕ್ಷೆಗೊಳಪಡಿಸಿದಾಗ ಬಾಲವಿವಾಹದಂತಹ ಅನಿಷ್ಟ ಪದ್ಧತಿ ತಡೆಗಟ್ಟಬಹುದು. ಯಾವುದೇ ಪ್ರಕರಣಗಳು ದಾಖಲಾದರೆ ಅದರ ಕುರಿತು ಅಧಿಕಾರಿಗಳು ಮುಂಜಾಗ್ರತೆ ವಹಿಸಿ ಕಾನೂನಿನ ನೆಲೆಗಟ್ಟಿನಲ್ಲಿ ಅಚ್ಚುಕಟ್ಟಾಗಿ ಕರ್ತವ್ಯ ಪಾಲನೆ ಮಾಡಬೇಕು ಎಂದು ಹೇಳಿದರು.
ಬಾಲ್ಯ ವಿವಾಹ ಪ್ರಕರಣಗಳು ದಾಖಲಾದ ಸಂದರ್ಭದಲ್ಲಿ, ಈ ಪ್ರಕರಣಗಳಿಗೆ ಹೆಚ್ಚಿನ ಆಧ್ಯತೆ ನೀಡಬೇಕು. ಪ್ರಕರಣಗಳ ಸಂಪೂರ್ಣ ಮಾಹಿತಿ ಕಲೆ ಹಾಕಿ, ಮೇಲಾಧಿಕಾರಿಗಳೊಂದಿಗೆ ಚಚರ್ೆ ನಡೆಸಬೇಕು. ಪ್ರಕರಣಕ್ಕೆ ಸಂಬಂಧಿಸಿದ ೆ ಸಾಕ್ಷಿ ಆಧಾರಗಳನಿಟ್ಟುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸುಳ್ಳು ಮಾಹಿತಿ ಸಲ್ಲಿಸದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಹೇಳಿದರು.
ಸಭೆಯಲ್ಲಿ ಜಿಲ್ಲಾ ಪೋಲಿಸ್ ಉಪಾಧೀಕ್ಷಕ ಶಂಕರ ಮಾರಿಹಾಳ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.