ಸಿರುಗುಪ್ಪ

ತಾಲೂಕು ಕ್ರೀಡಾಂಗಣ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ

ತಾಲೂಕು ಕ್ರೀಡಾಂಗಣ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ

ಸಿರುಗುಪ್ಪ 21: ನಗರದ ತಾಲೂಕು ಕ್ರೀಡಾಂಗಣಕ್ಕೆ ಬಳ್ಳಾರಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಭೇಟಿ ನೀಡಿದ ಅವರು ಪತ್ರಕರ್ತರೊಂದಿಗೆ ಮಾತನಾಡಿ ಈಗಾಗಲೇ ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಕ್ರೀಡಾಂಗಣದ ವೀಕ್ಷಕರ ಗ್ಯಾಲರಿ ಕಟ್ಟಡ ಹಾಗೂ ಜಿಮ್ ಕೋಟಡಿಗಳ ಪರಿಶೀಲನೆ  ಮಾಡಲಾಗಿದೆ ಕಟ್ಟಡ ಪಕ್ಕದಲ್ಲಿ 1.40 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಾರಂಭಗೊಂಡಿರುವ ಒಳಾಂಗಣ ಕ್ರೀಡಾಂಗಣದ ಕಾಮಗಾರಿ ವೀಕ್ಷಿಸುವುದಾಗಿ ಅವರು ತಿಳಿಸಿದರು ಜಿಲ್ಲಾ ಖನಿಜ ನಿಧಿ ಹಾಗೂ  ಶಾಸಕರ ಅನುದಾನದಲ್ಲಿ ನಗರದ ತಾಲೂಕು ಕ್ರೀಡಾಂಗಣವನ್ನು ಉತ್ತಮ ಹಾಗೂ ಎಲ್ಲಾ ಕ್ರೀಡೆಗಳಿಗೆ ಅವಕಾಶ ಕಲ್ಪಿಸುವ ರೀತಿಯಲ್ಲಿ ಅಭಿವೃದ್ಧಿಪಡಿಸಲು ಯೋಜನೆ ತಯಾರಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿರುವುದಾಗಿ ತಿಳಿಸಿದರು ಶಾಸಕ ಎಂಎಸ್ ಸೋಮಲಿಂಗಪ್ಪ, ಲೋಕೋಪಯೋಗಿ ಎ ಇ ಇ ಮುತ್ತಯ್ಯ , ನಿರ್ಮಿತ ಕೇಂದ್ರದ ಅಧಿಕಾರಿಗಳೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿ ನಗರದ ಮಧ್ಯಭಾಗದಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ಜಿಮ್ ಮತ್ತು ಒಳಾಂಗಣ ಕ್ರೀಡಾಂಗಣ ಸಿದ್ಧಗೊಳ್ಳುತ್ತಿದ್ದು ಇದರ ಜೊತೆಗೆ ಕ್ರಿಕೆಟ್ ಅಭ್ಯಾಸಕ್ಕೆ ನೆಟ್ ನಿರ್ಮಾಣ ವಾಲಿಬಾಲ್ ಕ್ರೀಡಾಂಗಣಕ್ಕೆ ಅಗತ್ಯ ಕ್ರಮ ಸೇರಿದಂತೆ ಕ್ರೀಡಾಂಗಣ ರಕ್ಷಣೆ ಮಾಡುವ ನಿಟ್ಟಿನಲ್ಲಿ ರಕ್ಷಣಾ ಗೋಡೆ ನಿಮರ್ಾಣದ ಬಗ್ಗೆ ಯೋಜನೆ ಸಿದ್ಧಪಡಿಸಲಾಗುವುದು ಆದರ್ಶ ಶಾಲೆ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ 5 ಬಸ್ಸುಗಳನ್ನು ಖರೀದಿಸಿ ನಗರ ಸಾರಿಗೆ ವ್ಯವಸ್ಥೆ ಮಾಡಲಾಗುವುದು ಎಂದರು ಅಪಾರ ಜಿಲ್ಲಾಧಿಕಾರಿ  ತಹಸಿಲ್ದಾರ್ ಎನ್ ಆರ್ ಮಂಜುನಾಥ ಸ್ವಾಮಿ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ , ಜಿಲ್ಲಾ ಸಾಕ್ಷರತಾ ಸದಸ್ಯ ಅಬ್ದುಲ್ ನಬಿ ಇತರರಿದ್ದರು.


ಸುದ್ದಿ ಓದಿ