ಜಲಮಾಲಿನ್ಯ ತಡೆಗಟ್ಟುವ ಕುರಿತು ಕ್ರಮ ಜಾರಿಗೆ: ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ
ಲೋಕದರ್ಶನ ವರದಿ,
ಜಮಖಂಡಿ 13: ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಪ್ರಯುಕ್ತ ಗೌರಿ ಹಾಗೂ ಗಣೇಶನ ವಿಗ್ರಹದ ಪ್ರತಿಮೆಗಳನ್ನು ಪ್ರತಿಷ್ಠಾಪಿಸಿ, ಕೆರೆ, ಬಾವಿ ಇನ್ನಿತರ ನೈಸಗರ್ಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಈ ಪ್ರತಿಮೆಗಳ ವಿಸರ್ಜನೆಯಿಂದ ನೈಸರ್ಗಿಕ ಜಲ ಮೂಲಗಳಲ್ಲಿ ಜಲ ಮಾಲಿನ್ಯ ಉಂಟಾಗುವುದು. ಉಚ್ಛ ನ್ಯಾಯಾಲಯ ಆದೇಶ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಸೂಚನೆಯಂತೆ ಈ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ಇನ್ನೂ ಮುಂದೆ ರಾಜ್ಯದ ಯಾವುದೇ ಕೆರೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಜಲಮಾಲಿನ್ಯ ತಡೆಗಟ್ಟುವ ಕುರಿತು ಈ ಕ್ರಮಗಳನ್ನು ಜಾರಿಗೊಳಿಸಲಾಗಿದೆಂದು ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ತಿಳಿಸಿದರು.
ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಸೆಕ್ಷನ್ 1860ರ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು. ಗೌರಿ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ರಾಸಾಯನಿಕ ಬಣ್ಣ ಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಟಾಪಿಸಿ,ಪೂಜಿಸಿದ ನಂತರ ಸಾಮೂ ಹಿಕವಾಗಿ ಗುರ್ತಿಸಿರುವ ಸ್ಥಳಗಳಲ್ಲಿ ವಿಸರ್ಜಿಸಬೇಕು. ನೈಸರ್ಗಿಕ, ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಕಲ್ಯಾಣಿಗಳ ಪಕ್ಕದಲ್ಲಿ ಹಸಿಕಸ (ಹೂ,ಹಣ್ಣು, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂತರ್ಿಗಳೊಂದಿಗೆ ನೀರಿಗೆ ವಿಸರ್ಜಿಸದೇ, ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಲು ಕ್ರಮ ವಹಿಸುವುದು. ಸಾರ್ವಜನಿಕವಾಗಿ ಇಡಲಾಗುವ ಗಣೇಶಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಪಂ ಮತ್ತು ಪೋಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಯನ್ನು ಪಡೆದ ನಂತರವೇ ಸ್ಥಾಪಿಸಬೇಕು.
ತಾಲೂಕುಗಳಿಗೆ ಬೇರೆ ಸ್ಥಳಗಳಿಂದ ಬರುವಂತಹ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ)ವಿಗ್ರಹಗಳನ್ನು ತಡೆಗಟ್ಟಲು ಸಂಬಂಧಿಸಿದ ಚೆಕ್ಪೋಸ್ಟ್ ಅಧಿಕಾರಿಗಳು ಸೂಕ್ತ ಕ್ರಮ ವಹಿಸುವುದು. ಈ ಸಾಂದರ್ಭಿಕವಾಗಿ ಗಣೇಶ ಹಬ್ಬದ ಸಂದರ್ಭದಲ್ಲಿ 7 ದಿನಗಳಿಗೆ ಮೀರದ ಂತೆ ನಿರಂತರ, ಬಳಕೆಗೆ ಧ್ವನಿವರ್ಧಕ, ಸಾರ್ವಜನಿಕ ಗಣೇಶ ಪೆಂಡಾಲಗಳಲ್ಲಿ ಬಳಸುವ ವಿದ್ಯುನ್ಮಾನ ಉಪಕರಣಗಳು ಮತ್ತು ಶಬ್ದ ಉಂಟು ಮಾಡುವ ಉಪಕರಣಗಳನ್ನು ಬಳಸಲು ಪೋಲೀಸ್ ಇಲಾಖೆ ಅನುಮತಿ ಪಡೆದುಕೊಳ್ಳಬೇಕೆಂದು ಸಾರ್ವಜನಿಕರಿಗೆ ಎಸಿ ಸಂತೋಷ ಕಾಮಗೌಡ ತಿಳಿಸಿದರು.