ಬೀದಿ ನಾಯಿಗಳ ಉಪಟಳ ಕಡಿವಾಣಕ್ಕೆ ಕ್ರಮ
Action to curb the menace of stray dogs
ಗದಗ ನವೆಂಬರ್ 17: ಗದಗ ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೇಲ್ವೆ ನಿಲ್ದಾಣಗಳಲ್ಲಿನ ಮುಖ್ಯಸ್ಥರು ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸಬೇಕು ಎಂದು ನಗರಸಭೆಯ ಪೌರಾಯುಕ್ತ ರಾಜಾರಾಮ್ ಪವಾರ ತಿಳಿಸಿದ್ದಾರೆ. ಸರ್ವೋಚ್ಚ ನ್ಯಾಯಾಲಯವು ಸ್ವಯಂ ಪ್ರೇರಿತ ರಿಟ್ ಅರ್ಜಿ ಸಂಖ್ಯೆ5/2025 ರಲ್ಲಿ ನೀಡಿರುವ ನಿರ್ದೇಶನದಂತೆ ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರೀಶೀಲಿಸಿ ಕೂಡಲೇ ಸಂಖ್ಯೆಯನ್ನು ಲೆಕ್ಕ ಮಾಡಿ ಪೌರಾಯುಕ್ತರಿಗೆ ತಿಳಿಸುವುದು.
ಗದಗ ಬೆಟಗೇರಿ ನಗರಸಭೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಬಧಿಸುವುದನ್ನು ಮೇಲ್ವಿಚಾರಣೆ ಮಾಡಲು ತಮ್ಮ ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವುದು. ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ತಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿ ಪುನ: ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವುಗಳನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿಂದ ವಸೂಲಿ ಮಾಡಲಾಗುವುದು. ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ತಮ್ಮ ವಿರುದ್ಧ ಕಾನೂನು ಕ್ರಮ ವಹಿಸಲಾಗುವದು ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 