ಮಹಿಳಾ ಮೋರ್ಚಾ ವತಿಯಂದ ಆದರ್ಶ ಅಂಗವಾಡಿ ಕಾರ್ಯಕ್ರಮ
ಲೋಕದರ್ಶನ ವರದಿ
ಶಿಗ್ಗಾವಿ 23: ಶಿಗ್ಗಾವಿ ತಾಲೂಕಿನ ಮೂಕಬಸರಿಕಟ್ಟಿ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಬಿಜೆಪಿಯ ಮಹಿಳಾ ಮೋರ್ಚಾ ವತಿಯಂದ ಆದರ್ಶ ಅಂಗವಾಡಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ತುಂಬು ಗರ್ಭಿಣಿಯರಿಗೆ ಉಡಿ ತುಂಬುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜೊತೆಗೆ ಸಸಿ ನೆಡುವ ಕಾರ್ಯಕ್ರಮ ಹಾಗೂ ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆ ಉಷಾ ಬಿಳೆಕುದರಿ ಹಾಗೂ ಪ್ರಧಾನ ಕಾರ್ಯದರ್ಶ ಸಂಜನಾ ರಾಯ್ಕರ ಮಾತನಾಡಿದರು.
ಈ ಸಂದರ್ಭದಲ್ಲಿ ಮಹಿಳಾ ಮುಖಂಡರಾದ ರತ್ನಾ ಬನ್ನಿಕೊಪ್ಪ, ನಿರ್ಮಲಾ ಯಡೆಪ್ಪನವರ, ಭಾರತಿ ರಾಮಪೂರಮಠ, ಶಿಕ್ಷಕಿ ಅಶ್ವಿನಿ ಸೇರಿದಂತೆ ಗ್ರಾಮದ ಮಹಿಳೆಯರು, ಕಾರ್ಯಕರ್ತರು ಉಪಸ್ಥಿತರಿದ್ದರು