ಹಲ್ಲೆಗೊಳಗಾದ ಸಿದ್ದು ಬೋವಿಗೆ ಸೂಕ್ತ ಪರಿಹಾರ ನೀಡಬೇಕು: ಇಮ್ಮಡಿ ಶ್ರೀಸಿದ್ದರಾಮೇಶ್ವರ ಶ್ರೀಗಳು
Adequate compensation should be given to the assaulted Siddu Bovi: Immadi Srisiddharameshwar
ಹಲ್ಲೆಗೊಳಗಾದ ಸಿದ್ದು ಬೋವಿಗೆ ಸೂಕ್ತ ಪರಿಹಾರ ನೀಡಬೇಕು: ಇಮ್ಮಡಿ ಶ್ರೀಸಿದ್ದರಾಮೇಶ್ವರ ಶ್ರೀಗಳು
ಕೊಪ್ಪಳ 31: ಮಾರಣಾಂತಿಕ ಹಲ್ಲೆಗೊಳಗಾದ ಸಿದ್ದು ಬೋವಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಬೇಕು ಎಂದು ಚಿತ್ರದುರ್ಗದ ಭೋವಿ ಗುರುಪೀಠದ ಇಮ್ಮಡಿ ಶ್ರೀಸಿದ್ದರಾಮೇಶ್ವರ ಶ್ರೀಗಳು ಸರಕಾರವನ್ನು ಒತ್ತಾಯಿಸಿದರು.
ಅವರು ನಗರದ ಜಿಲ್ಲಾಸ್ಪತ್ರೆಯಲ್ಲಿ ಹಲ್ಲೆಗೊಳಗಾದ ಸಿದ್ದು ಭೋವಿ ಅವರನ್ನು ಭೇಟಿ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಹಳೆ ವೈಷಮ್ಯ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ಕೊಪ್ಪಳದ ಗಂಗಾವತಿ ತಾಲೂಕಿನ ಸಂಗಾಪುರ ರಸ್ತೆಯ ಸ್ಪೂರ್ತಿ ಕಾಲೇಜ್ ಬಳಿ ಘಟನೆ ನಡೆದಿದ್ದು. ಗ್ರಾಮದ ಸಿದ್ದು ಭೋವಿ ಎನ್ನುವ ಯುವಕನ ಮೇಲೆ 10 ರಿಂದ 15 ಜನರಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಲ್ಲೆಗೊಳಗಾದ ಸಿದ್ಧು ಭೋವಿಯನ್ನು ಜಿಲ್ಲಾಸ್ಪತ್ರೆಗೆ ಚಿತ್ರದುರ್ಗದ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿ ಭೇಟಿ ನೀಡಿ ಹಲ್ಲೆಗೊಳಗಾದ ಯುವಕನ ಸ್ಥಿತಿ ವಿಚಾರಿಸಿದ ಶ್ರೀಗಳಿಗೆ ಹಲ್ಲೆ ಬಗ್ಗೆ ವಿವರಿಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದುವಿವರಿಸಿದ್ದಾರೆ.
ಈ ರೀತಿ ಕೃತ್ಯಗಳನ್ನು ಮಾಡಬಾರದು,ಅಕ್ರಮ ಚಟುವಟಿಕೆಗಳು ನಡೆಸುವುದು ಕಾನೂನು ಬಾಹೀರ ಎಂದು ಹೇಳಿದ ಶ್ರೀಗಳು ಯುವಕ ಸಿದ್ದು ಮೇಲೆ ಹಲ್ಲೆ ಮಾಡಿರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಆಗಬೇಕು ಸಿದ್ದು ಹಾಗೂ ಅವರ ಕುಟುಂಬಕ್ಕೆ ಭದ್ರತೆ ಕೊಡಬೇಕು,ಸಂಗಾಪುರ ಗ್ರಾಮದ ಐತಿಹಾಸಿಕ ಲಕ್ಷ್ಮಿ ನಾರಾಯಣ ಕೆರೆಯ ಮಣ್ಣು ಸಾಗಾಟ ವಿಚಾರವಾಗಿ ನಡೆದಿರುವ ಗಲಾಟೆಯಾಗಿದೆ. ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೇ 3 ಆರೋಪಿಗಳನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ಹೇಳಿದರು. ನಂತರ ಭೋವಿ ಸಮಾಜದ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ಸಿದ್ದು ಬೋವಿ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಭೋವಿ ಸಮಾಜದ ಮುಖಂಡರಾದ ಬಸವರಾಜ ಭೋವಿ, ಯಮನೂರ್ಪ ಭೋವಿ, ಗಾಳೆಪ್ಪ ಬೋವಿ, ಸುಂಕಪ್ಪ ಬೋವಿ, ಪರಶುರಾಮ್ ತಾವರಗೇರಾ, ಕಾವೇರಿ ರಾಗಿ, ಪುಷ್ಪಾಂಜಲಿ ಗುನ್ನಾಳ್, ರಾಮು ಪೂಜಾರ್, ರಮೇಶ್ ತಗ್ಗಿ ಸೇರಿದಂತೆ ಭೋವಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 