ಜೀವನದಲ್ಲಿ ಆರೋಗ್ಯಕರವಾದ ಜೀವನಶೈಲಿಯನ್ನು ರೂಡಿಸಿಕೊಳ್ಳಿ: ರಾಠೋಡ
Adopt a healthy lifestyle in life: Rathod
ಸವದತ್ತಿ 17: ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಜೀವನದಲ್ಲಿ ಆರೋಗ್ಯಕರವಾದ ಜೀವನಶೈಲಿಯನ್ನು ರೂಡಿಸಿಕೊಂಡಲ್ಲಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಹೊರಹೊಮ್ಮಬಹುದು ಹಾಗೂ ಆರೋಗ್ಯಯುತವಾಗಿ ಬದುಕನ್ನು ಸಾಗಿಸಲು ಸಾಧ್ಯ ಎಂದು ಮುಖ್ಯೋಪಾಧ್ಯಾಯರಾದ ಆರ್ ಸಿ ರಾಠೋಡ ಹೇಳಿದರು. ಸರ್ಕಾರದ ನಿರ್ದೇಶನದ ಮೇರೆಗೆ ನವೆಂಬರ್ ತಿಂಗಳ "ಸಂಭ್ರಮ ಶನಿವಾರ" ಕಾರ್ಯಕ್ರಮದ ವಿಷಯವಾಗಿರುವ "ಆರೋಗ್ಯಕರ ಜೀವನ ಶೈಲಿ"ವಿಷಯದ ಬಗ್ಗೆ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮಾರ್ಗದರ್ಶನ ಮಾಡಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹುಲಿಕಟ್ಟಿ ಭಾಗದ ಸಿ ಆರ್ ಸಿ ಸಂಪನ್ಮೂಲ ವ್ಯಕ್ತಿಗಳಾದ ಕುಂಬಾರ ರವರು ಮಾತನಾಡಿ ಆರೋಗ್ಯಕರ ಜೀವನ ಶೈಲಿ ಎಂದರೆ ಕೇವಲ ನಮ್ಮ ವೈಯಕ್ತಿಕ ಆರೋಗ್ಯ, ವೈಯಕ್ತಿಕ ಶುಚಿತ್ವ ಅಷ್ಟೇ ಅಲ್ಲ .ಜೀವನದ ಪ್ರತಿ ಹಂತದಲ್ಲಿ, ಪ್ರತಿ ಕ್ಷಣದಲಿಯೂ ಸಹಿತ ಆರೋಗ್ಯಕರ ಜೀವನ ಶೈಲಿಯನ್ನು ಬೆಳೆಸಿಕೊಳ್ಳಬೇಕು. ಅಂದಾಗ ಮಾತ್ರ ಪ್ರತಿಯೊಬ್ಬ ವಿದ್ಯಾರ್ಥಿ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯ. ಕಾರಣ ಇಂತಹ ಜೀವನ ಶೈಲಿಯನ್ನು ಚಿಕ್ಕ ವಯಸ್ಸಿನಲ್ಲಿಯೇ ಬೆಳೆಸಿಕೊಳ್ಳಲು ಶಾಲಾ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ವಿಜ್ಞಾನ ಶಿಕ್ಷಕರಾದ ಬಿ ಎಚ್ ನದಾಫ್ ಮಾತನಾಡಿ ಮುಂಜಾನೆಯಿಂದ ರಾತ್ರಿಯವರಿಗೆ ಪ್ರತಿ ವಿದ್ಯಾರ್ಥಿ ತಮ್ಮ ಜೀವನ ಶೈಲಿಯನ್ನು ಹೇಗೆ ರೂಡಿಸಿಕೊಳ್ಳಬೇಕು ಮತ್ತು ವಿದ್ಯಾಭ್ಯಾಸವನ್ನು ಹೀಗೆ ಮಾಡಬೇಕು ಎಂಬ ಬಗ್ಗೆ ತಿಳುವಳಿಕೆ ನೀಡಿದರು. ಹಲವು ವಿದ್ಯಾರ್ಥಿಗಳು ತಾವು ಅಳವಡಿಸಿಕೊಂಡ ಆರೋಗ್ಯಕರ ಜೀವನ ಶೈಲಿಯ ಬಗ್ಗೆ ಮುಕ್ತವಾಗಿ ಅನುಭವ ಹಂಚಿಕೊಂಡರು. ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲೆಯ ಪ್ರಧಾನ ಗುರುಗಳಾದ ಸಂತೋಷ ನಿಂಗರಡ್ಡಿ ,ಪ್ರೌಢ ಶಾಲೆಯ ಶಿಕ್ಷಕರಾದ ಬಿ ಜಿ ಪಾಟೀಲ, ಜೆ ಕೆ ಪಾಟೀಲ, ಎಸ್ ವ್ಹಿ ಶೆಟ್ಟರ, ಎಚ್ ಎನ್ ಯಡ್ರಾವಿ,ಡಿ ಸಿ ಕೊಡ್ಲಿ,ಬಿ ಎಸ್ ಜೋತೆನ್ನವರ ಉಪಸ್ಥಿತರಿದ್ದರು
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 