ಕಡಿಮೆ ಸಂಪನ್ಮೂಲಗಳನ್ನು ಬಳಸಿ ಉತ್ತಮ ಮತ್ತು ಗುಣಮಟ್ಟದ ಉತ್ಪಾದನೆಯ ಗುರಿ : ಅವ್ವಾರು ಮಂಜುನಾಥ್
Aiming for better and quality production using fewer resources: Avvaru Manjunath
ಬಳ್ಳಾರಿ 12: ಕಡಿಮೆ ಪ್ರಮಾಣದಲ್ಲಿ ಸಂಪನ್ಮೂಲಗಳನ್ನು ಬಳಕೆ ಮಾಡಿಕೊಂಡು ಉತ್ತಮವಾದ ಉತ್ಪಾದನೆ ಮಾಡಿ ಗುಣಮಟ್ಟವನ್ನು ಕಾಪಾಡಿಕೊಳ್ಳುವುದು ಪ್ರತಿ ಉದ್ಯಮ ಮತ್ತು ಉದ್ಯಮಿಯ ಸವಾಲಾಗಿರುತ್ತದೆ ಎಂದು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ್ ಅವರು ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಇಂಟರ್ ನ್ಯಾಷನಲ್ ಕಾಪರ್ ಅಸೋಸಿಯೇಶನ್ ಆಫ್ ಇಂಡಿಯಾ ಹಾಗೂ ಎನರ್ಜಿ ಎಫಿಶಿಯನ್ಸಿ ಸರ್ವಿಸಸ್ ಲಿಮಿಟೆಡ್ನ ಜಂಟಿ ಸಹಭಾಗಿತ್ವದಲ್ಲಿ ನಡೆದ ಕೈಗಾರಿಕೆಗಳು ಮತ್ತು ಬಂಡವಾಳ ಹೂಡಿಕೆದಾರರಿಗೆ ಹೊಸ ದಿಕ್ಕನ್ನು ಮೂಡಿಸುವ ‘ವಿಶ್ವಾಸಾರ್ಹತೆಯ ವೇಗವರ್ಧನೆ’ಯ ಕಾರ್ಯಾಗಾರವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
ಜಾಗತಿಕ ಮಟ್ಟದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಸ್ಪರ್ಧೆ ಹೆಚ್ಚುತ್ತಿದೆ. ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಕೈಗಾರಿಕೆಗಳು ಉತ್ಪನ್ನದ ಗುಣಮಟ್ಟ, ಬೆಲೆ - ಸಕಾಲಿಕ ಸೇವೆ ಇನ್ನಿತರೆಗಳ ಕುರಿತು ವಿಶೇಷ ಗಮನ ನೀಡಬೇಕು. ಉದ್ಯಮದ ಬೆಳವಣಿಗೆಯ ಕಾರ್ಯಕ್ಷಮತೆ ಮತ್ತು ವಿಶ್ವಾಸಾರ್ಹತೆಯ ಕಡೆಗೆ ಉದ್ಯಮಿಗಳು ವಿಶೇಷ ಗಮನ ನೀಡಬೇಕಿದೆ ಎಂದರು. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಕೆ.ಸಿ. ಸುರೇಶಬಾಬು ಅವರು, ಅತಿಥಿಗಳಾಗಿ - ಉದ್ಯಮದಲ್ಲಿ ಕಾರ್ಯಕ್ಷಮತೆ ಹೆಚ್ಚಿಸುವುದು ಎಂದರೆ ಕಡಿಮೆ ಪ್ರಮಾಣದ ಸಂಪನ್ಮೂಲಗಳನ್ನು ಬಳಕೆ ಮಾಡಿಕೊಂಡು ಹೆಚ್ಚಿನ ಪ್ರಮಾಣದಲ್ಲಿ - ಗುಣಮಟ್ಟದ ಉತ್ಪಾದನೆ ಮಾಡುವುದು. ಈ ನಿಟ್ಟಿನಲ್ಲಿ ಯಂತ್ರೋಪಕರಣಗಳ ವೇಗ ಮತ್ತು ನಿರ್ವಹಣೆ - ಸುರಕ್ಷತೆ, ಆಧುನಿಕ ತಂತ್ರಜ್ಞಾನದ ಬಳಕೆ, ಡೇಟಾ ವಿಶ್ಲೇಷಣೆ ಇನ್ನಿತರೆಗಳ ಕುರಿತು ವಿಶೇಷ ಗಮನ ನೀಡಬೇಕು ಎಂದರು.
ಇಂಟರ್ ನ್ಯಾಷನಲ್ ಕಾಪರ್ ಅಸೋಸಿಯೇಶನ್ ಆಫ್ ಇಂಡಿಯಾದ ಯೋಜನಾ ವ್ಯವಸ್ಥಾಪಕರಾದ ಮೋಹಿತ್ ಗುಪ್ತ ಅವರು ಸ್ವಾಗತ ಕೋರಿ ಕಾರ್ಯಕ್ರಮ ನಿರೂಪಿಸಿ, ವಂದನಾರೆ್ಣ ಸಲ್ಲಿಸದರು. ಎನರ್ಜಿ ಎಫಿಶಿಯನ್ಸಿ ಸರ್ವಿಸಸ್ ಲಿಮಿಟೆಡ್ನ ಅಭಿಶೇಕ್ ಗುಪ್ತ ಮತ್ತು ಶಂತನು ದೇಬ್ನಾಥ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸ ನೀಡಿದರು. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾದ ಎಸ್. ದೊಡ್ಡನಗೌಡ, ಸ್ಪಾಂಜ್ ಐರನ್ ಅಸೋಸಿಯೇಷನ್ನ ಕಾರ್ಯದರ್ಶಿ ಎಸ್.ಪಿ. ವೆಂಕಟೇಶ್, ಕೋಲ್ಡ್ ಸ್ಟೋರೇಜ್ ಅಸೋಸಿಯೇಷನ್ ಅಧ್ಯಕ್ಷರಾದ ಬಿ. ಸತ್ಯಬಾಬು, ಕಾಟನ್ ಅಸೋಸಿಯೇಷನ್ನ ಅಧ್ಯಕ್ಷರಾದ ಡಿ. ತಿಪ್ಪೇಸ್ವಾಮಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ವಿಶೇಷ ಆಹ್ವಾನಿತರು, ವಿಶೇಷ ಸಮನ್ವಯ ಸಮಿತಿ ಸದಸ್ಯರು, ವಿವಿಧ ಸಂಘ - ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 