ಧಾರವಾಡ - ಹುಬ್ಬಳ್ಳಿ

ಅಕ್ಕಮಹಾದೇವಿ ಅನುಭವ ಪೀಠ ಸಭಾಭವನ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ

ಅಕ್ಕಮಹಾದೇವಿ ಅನುಭವ ಪೀಠ ಸಭಾಭವನ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ

ಅಕ್ಕಮಹಾದೇವಿ ಅನುಭವ ಪೀಠ ಸಭಾಭವನ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ 

ಧಾರವಾಡ 25 : ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ ಧಾರವಾಡ ಗ್ರಾಮೀಣ ಯೋಜನಾ ಕಚೇರಿ ಹಾಗೂ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಮಹಿಳಾ ಜ್ಞಾನವಿಕಾಸ ಕೇಂದ್ರಗಳ ಸಹಕಾರದೊಂದಿಗೆ ನಗರದ ಜಗನ್ಮಾತಾ ಅಕ್ಕಮಹಾದೇವಿ ಅನುಭವ ಪೀಠ ಸಭಾಭವನ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ.  ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅತ್ಯುತ್ತಮ ಸ್ವಯಂಸೇವಾ ಸಂಸ್ಥೆಯಾಗಿ  ಬಡಜನರ ಏಳಿಗೆಗಾಗಿ ಶ್ರಮಿಸುತ್ತಿರುವುದು  ಶ್ಲಾಘನೀಯ. ವಿಶೇಷವಾಗಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಹಮ್ಮಿಕೊಂಡಿರುವ ಇಂತಹ ಕಾರ್ಯಕ್ರಮ ಸಂತೋಷದಾಯಕ. ಸ್ವಸಹಾಯ ಸಂಘದ ಸದಸ್ಯರಿಗೆ  ಸರಕಾರದಿಂದ ಹಲವಾರು ಕಾರ್ಯಕ್ರಮಗಳು ಜಾರಿಯಲ್ಲಿವೆ .ಅದರಲ್ಲಿ ಪ್ರಮುಖವಾಗಿ ಎನ್‌.ಆರ್‌.ಎಲ್‌.ಎಂ. ಮೂಲಕ ಸ್ವಸಾಯ ಸಂಘಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಬ್ಸಿಡಿ ಸಾಲಗಳನ್ನು  ನೀಡುವ ಯೋಜನೆ ಇದೆ ಎಂದರು. 

 ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ ಪ್ರಾದೇಶಿಕ ನಿರ್ದೇಶಕಿ ದಯಾಶೀಲ ಮಾತನಾಡಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು  ಹಾಗೂ ಡಾ. ಹೇಮಾವತಿ ವಿ ಹೆಗ್ಗಡೆ  ಗ್ರಾಮಾಭಿವೃದ್ಧಿ ಯೋಜನೆ ಮೂಲಕ  ಈ ನಾಡಿಗೆ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಅದರಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ಕೂಡ ಒಂದು ಈ ಕಾರ್ಯಕ್ರಮದ ಮೂಲಕ ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ತುಂಬಾ ಕೆಲಸವನ್ನು ಹೆಗ್ಗಡ ದಂಪತಿಗಳು ಮಾಡುತ್ತಿದ್ದಾರೆ ಎಂದರು.ಅಕ್ಕಮಹಾದೇವಿ ಆಶ್ರಮದ ಮಾತೆ ಜ್ಞಾನೇಶ್ವರಿ ಸಾನಿಧ್ಯವಹಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ ಮಹಾಪೌರರಾದ ದುರ್ಗಮ್ಮ ಬಿಜವಾಡ ವಹಿಸಿದ್ದರು.ಮಾಜಿ ಮೇಯರ ಶಿವು ಹಿರೇಮಠ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ  ವಸಂತ  ಅರ್ಕಾಚಾರ ಜಿಲ್ಲಾ ನಿರ್ದೇಶಕ ಪ್ರದೀಪ್ ಶೆಟ್ಟಿ ವೇದಿಕೆಯಲ್ಲಿದ್ದರು. 

ಡಾ. ಮೈತ್ರೇಯಿಣಿ ಗದಿಗೆಪ್ಪಗೌಡ ಕುಟುಂಬದಲ್ಲಿ ಮಹಿಳೆಯರ ಪಾತ್ರ ಹಾಗೂ ಸಂಸ್ಕೃತಿ ಮತ್ತು ಸಂಸ್ಕಾರ ವಿಷಯದ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ  ಯೋಜನೆಯ ಸೌಲಭ್ಯಗಳನ್ನು ಪಡೆದು ಯಶಸ್ಸು ಕಂಡು ಸಾಧನೆಗೈತ ಸಾಧಕ ಮಹಿಳೆಯರಿಗೆ ಸನ್ಮಾನಿಸಲಾಯಿತು. ಕ್ಷೇತ್ರ ಯೋಜನಾಧಿಕಾರಿ ಮಯೂರ್ ತೋರಸ್ಕರ್  ಸ್ವಾಗತಿಸಿದರು, ಸಮನ್ವಯಾಧಿಕಾರಿ  ವಿಜಯಲಕ್ಷಿ-್ಮ ನಿರೂಪಿಸಿ ವಂದಿಸಿದರು. 


ಸುದ್ದಿ ಓದಿ