ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ
ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ
ಧಾರವಾಡ 22 ; ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಮತ್ತು ಮನೆಗೆ ಸೂಕ್ತ ಪರಿಹಾರ ನೀಡುವಂತೆ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಗೆ ಆಗ್ರಹ.
ಇಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಎ ಐ ಕೆ ಕೆ ಎಂ ಎಸ್ ) ಧಾರವಾಡ ಜಿಲ್ಲಾ ಸಮಿತಿ ಸಭೆಯು ರೈತ ಸಂಘಟನೆಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೈತರ ಬೆಳೆ ಹಾನಿಯಾಗುತ್ತಿರುವುದರ ಬಗ್ಗೆ ಮತ್ತು ಮನೆ ಬಿದ್ದಿರುವುದರ ಕುರಿತು ಚರ್ಚಿಸಿ ಸರ್ಕಾರ ಸೂಕ್ತ ಪರಿಹಾರ ನೀಡದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡುವುದರ ಕುರಿತು ನಿರ್ಧಾರ ಕೈಗೊಳ್ಳಲಾಯಿತು.
ಜಿಲ್ಲಾ ಸಮಿತಿ ಸಭೆಗೆ ಆಗಮಿಸಿದ್ದ ರಾಜ್ಯ ಉಪಾಧ್ಯಕ್ಷರಾದ ವಿ ನಾಗಮ್ಮಾಳ್ ಮಾತನಾಡಿ ಪ್ರಕೃತಿ ವಿಕೋಪದಿಂದ ರೈತರ ಬೆಳೆ ಹಾನಿ ಒಂದಡೆ ಆಗುತ್ತಿದೆ. ಇನ್ನೊಂದಡೆ ಸರ್ಕಾರ ಜಾರಿ ಮಾಡುತ್ತಿರುವ ನೀತಿಗಳಿಂದಾಗಿ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ದಿನೇ ದಿನೇ ಹೆಚ್ಚಾಗುತ್ತಿವೆ. ಇದರ ವಿರುದ್ಧ ರೈತರು ಒಂದಾಗಿ ಚಳುವಳಿಯನ್ನು ಕಟ್ಟುವುದು ಅವಶ್ಯಕತೆ ಇದೆ.
ಇಂದು ನಡೆದ ಜಿಲ್ಲಾ ಸಮಿತಿ ಸಭೆಯಲ್ಲಿ ಚರ್ಚಿಸಿ ಈ ಕೆಳಕಂಡ ನಿರ್ಧಾರಗಳನ್ನು ತಗೆದುಕೊಳ್ಳಲಾಯಿತು
1. ಧಾರವಾಡ ಜಿಲ್ಲೆಯಾದ್ಯಂತ ಅತಿಯಾದ ಮಳೆಯಿಂದ ಹಾನಿಗೊಳಗಾದ ಬೆಳೆಗೆ ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿ ಹೋರಾಟ ಕಟ್ಟುವುದು.
2. ಬಗರ್ ಹುಕು0 ಸಾಗುವಳಿದವರಿಗೆ ಹಕ್ಕು ಪತ್ರ ನೀಡುವಂತೆ ಒತ್ತಾಯಿಸಲು ನಿರ್ಣಯಿಸಲಾಯಿತು.3. ನರೇಗಾ ಕಾರ್ಮಿಕರಿಗೆ ಹೆಚ್ಚುವರಿ 50 ದಿನಗಳನ್ನು ಕೆಲಸಕ್ಕೆ ಒತ್ತಾಯಿಸಲು.
4. ಜಿಲ್ಲೆಯಲ್ಲಿ ಹದಗೆಟ್ಟ ರಸ್ತೆ, ಸಮರ್ಕ ಬಸ್ ಸೌಲಭ್ಯಕ್ಕೆ ಒತ್ತಾಯಿಸಲು.
ಸಮಿತಿಯ ಸಭೆಯಲ್ಲಿ ಜಿಲ್ಲಾ ಅಧ್ಯಕ್ಷರಾದ ದೀಪಾ ಧಾರವಾಡ ಜಿಲ್ಲಾ ಕಾರ್ಯದರ್ಶಿ ಶರಣು ಗೋನವರ ಜಿಲ್ಲಾ ಸಮಿತಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.